GOOD NEWS: ವಸತಿ ಶಾಲೆ, ಕಾಲೇಜುಗಳಿಗೆ ಸರ್ಕಾರದಿಂದ ಉಚಿತ ವಿದ್ಯುತ್: ಸಮಾಜ ಕಲ್ಯಾಣ ಇಲಾಖೆ ಆದೇಶ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಪರಿಶಿಷ್ಟ ಜಾತಿಯ 503 ವಸತಿ ಶಾಲೆಗಳು, ಪರಿಶಿಷ್ಟ ಪಂಗಡ 144, ಹಿಂದುಳಿದ ವರ್ಗದ 174 ಸೇರಿ ಒಟ್ಟಾರೆ 821 ವಸತಿ ಶಾಲಾ, ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಸಲು ವಾರ್ಷಿಕ ಅಂದಾಜು 36 ಕೋಟಿ ರೂ. ಬೇಕಾಗುತ್ತದೆ. ಮೂರು ಇಲಾಖೆಗಳು ಕ್ರಮವಾಗಿ 23 ಕೋಟಿ ರೂ., 6 ಕೋಟಿ ರೂ. ಮತ್ತು 7 ಕೋಟಿ ರೂ. ವ್ಯಯಿಸಬೇಕಾಗುತ್ತದೆ.

ಎಸ್ಸಿ, ಎಸ್ಟಿ ವಸತಿ ಶಾಲೆಗಳ 29 ಕೋಟಿ ರೂಪಾಯಿ ವಿದ್ಯುತ್ ಬಿಲ್ ಅನ್ನು ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಅಡಿ ಒದಗಿಸುವ ಅನುದಾನದ ಮೂಲಕ ಭರಿಸಬೇಕು. ಉಚಿತ ವಿದ್ಯುತ್ ಸೌಲಭ್ಯವನ್ನು ಮಿತವಾಗಿ ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಬೇಕು ಎಂದು ಪ್ರಾಂಶುಪಾಲರಿಗೆ ಮತ್ತು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read