HomeKarnatakaಈ ಸರ್ಕಾರ ಹೋಗುವುದು ಗ್ಯಾರಂಟಿ: ಸಂಸದ ರಮೇಶ ಜಿಗಜಿಣಗಿ

ಈ ಸರ್ಕಾರ ಹೋಗುವುದು ಗ್ಯಾರಂಟಿ: ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ, ಬಿಡಲಿ, ಅದಕ್ಕೂ ನಮಗೂ ಸಂಬಂಧವಿಲ್ಲ. ಆದರೆ, ಈ ಸರ್ಕಾರ ಹೋಗುವುದು ಗ್ಯಾರಂಟಿ ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಪರಿಷ್ಕರಣೆ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ಯೋಜನೆ ಸರ್ಕಾರಕ್ಕೆ ಸಂಬಂಧಿಸಿದ ವಿಷಯ. ಮುಂದೆ ಕಾಂಗ್ರೆಸ್ ಸರ್ಕಾರ ಏನಾಗುತ್ತದೆ ಎನ್ನುವುದು ನನಗೆ ಗೊತ್ತಿದೆ. ರಾಮಕೃಷ್ಣ ಹೆಗಡೆಯವರಿಗೆ ಮುಂದೇನಾಗುತ್ತದೆ ಎನ್ನುವುದು ಗೊತ್ತಾಗುತ್ತಿತ್ತು. ದೇವರ ದಯೆಯಿಂದ ನನಗೂ ಅವರ ಮಾದರಿಯಲ್ಲಿ ಮುಂದೇನಾಗುತ್ತದೆ ಎಂದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ. ನೋಡ್ತಾ ಇರಿ, ಎಲ್ಲವೂ ನಿಲ್ಲುತ್ತವೆ. ಈ ಸರ್ಕಾರ ಬಹಳ ದಿನ ನಡೆಯಲ್ಲ ಎಂದು ರಮೇಶ್ ಜಿಗಜಿಣಗಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular