HomeLatest Newsಸರ್ಕಾರದ ಗ್ಯಾರಂಟಿ ಅಭಿವೃದ್ಧಿಗೆ ಮಾರಕ: ಉಚಿತ ಯೋಜನೆ ದೊಡ್ಡ ತಪ್ಪು: ಸಂತೋಷ್ ಹೆಗ್ಡೆ

ಸರ್ಕಾರದ ಗ್ಯಾರಂಟಿ ಅಭಿವೃದ್ಧಿಗೆ ಮಾರಕ: ಉಚಿತ ಯೋಜನೆ ದೊಡ್ಡ ತಪ್ಪು: ಸಂತೋಷ್ ಹೆಗ್ಡೆ

ಮದ್ದೂರು: ಉಚಿತ ಯೋಜನೆ ಕೊಡುವುದು ದೊಡ್ಡ ತಪ್ಪು, ಸರ್ಕಾರದ ಗ್ಯಾರಂಟಿಗಳು ಅಭಿವೃದ್ಧಿಗೆ ಮಾರಕ ಎಂದು ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡುವುದೇ ದೊಡ್ಡ ತಪ್ಪು, ಅಭಿವೃದ್ಧಿಗೆ ಹಣ ಇಲ್ಲ ಎನ್ನುವವರು ಗ್ಯಾರಂಟಿ ಯೋಜನೆಗಳಿಗೆ ಕೊಡುತ್ತಿದ್ದಾರೆ. ಇಂತಹ ಯೋಜನೆಗಳು ಅಭಿವೃದ್ಧಿಗೆ ಮಾರಕವಾಗಿದ್ದು, ಆರ್ಥಿಕ ಪರಿಸ್ಥಿತಿ ತಲ್ಲಣಕ್ಕೂ ಕಾರಣವಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಜನ ಕೇಳಿರಲಿಲ್ಲ. ಅಧಿಕಾರಕ್ಕೆ ಬರುವುದನ್ನೇ ಗುರಿಯಾಗಿಸಿಕೊಂಡು ಗ್ಯಾರಂಟಿ ಘೋಷಿಸಿದರು. ಪ್ರತಿ ವರ್ಷ 25000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಿದ್ದಾರೆ. ಇನ್ನು ಅಭಿವೃದ್ಧಿಗೆ ಹಣ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಯಾರಂಟಿಗೆ ಹಣ ಖರ್ಚು ಮಾಡುತ್ತಿರುವುದನ್ನು ಸರಿದೂಗಿಸಲು ಜನರ ಮೇಲೆ ತೆರಿಗೆ ಹೆಚ್ಚಿಸಿದ್ದಾರೆ. ವಿದ್ಯುತ್, ನೋಂದಣಿ ಶುಲ್ಕ, ಮದ್ಯ ಸೇರಿದಂತೆ ಹಲವು ತೆರಿಗೆ ಹೆಚ್ಚಳ ಮಾಡಲಾಗಿದೆ. ಜನರ ಮೇಲೆ ತೆರಿಗೆ ಹೊರೆ ಹಾಕಿ ನುಡಿದಂತೆ ನಡೆದಿದ್ದೇವೆ ಎನ್ನುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular