HomeKarnatakaಹುಬ್ಬಳ್ಳಿ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಬೇಕೆಂಬ ಗೃಹ ಇಲಾಖೆಯ ಸೂಚನೆಯಂತೆ ಪೊಲೀಸರು ಕ್ರಮ ಕೈಕೊಂಡಿದ್ದಾರೆ  ಎಂದರು.

ಬಂಧಿತರಲ್ಲಿ ಕೆಲವರು ಹಳೆಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಕರಸೇವಕರು ಇದ್ದಿರಬಹುದು. ರಾಜ್ಯ ಸರ್ಕಾರ ಕರಸೇವಕರನ್ನೇ ಗುರಿಯಾಗಿಟ್ಟುಕೊಂಡು ಕ್ರಮಕೈಗೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆ ಏನಿದೆ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular