ರಾಮನಗರ: ಖಾತಾ ಪರಿವರ್ತನೆ ಹೆಸರಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಹಗಲು ದರೋಡೆ ಮಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದಾರೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ. ಹೀಗಾಗಿ ಹಗಲು ದರೋಡೆ ದಂಧೆ ನಡೆಸುತ್ತಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್ಆರ್ ವ್ಯಾಲ್ಯೂ ಮೇಲೆ ದರ ಫಿಕ್ಸ್ ಮಾಡಿ ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ 7.5 ಲಕ್ಷ ಮನೆಗಳು ಖಾತಾ ಬದಲಾವಣೆ ವ್ಯಾಪ್ತಿಗೆ ಒಳಪಡುತ್ತವೆ. 100 ದಿನ ಗಡುವು ನೀಡಿದ್ದಾರೆ. ಖಾತೆ ವರ್ಗಾವಣೆಗೆ ಒಂದೊಂದು ಕಡೆ ಒಂದೊಂದು ಎಸ್ಆರ್ ವ್ಯಾಲ್ಯೂ ಇದೆ. ಬಡ, ಮಧ್ಯಮ ವರ್ಗದವರಿಗೆ ಇದರಿಂದ ತೊಂದರೆಯಾಗುತ್ತದೆ. ಜನರಿಗೆ ಒತ್ತಡ ಹೇರಿ ಅವರಿಂದ ಹಣ ಕಸಿದು ಅವರಿಗೇ ಗ್ಯಾರಂಟಿ ರೂಪದಲ್ಲಿ ವಾಪಸ್ ಕೊಡುತ್ತಾರೆ ಎಂದು ಟೀಕಿಸಿದ್ದಾರೆ.
