ರಾಮನಗರ: ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಭೂ ಸ್ವಾಧೀನಕ್ಕೆ ಸರ್ಕಾರದಿಂದ 2ನೇ ಹಂತದ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
ಅಂತಿಮ ಅಧಿಸೂಚನೆಯ ಬಗ್ಗೆ ಪತ್ರಿಕೆಗಳಲ್ಲಿ ಜಿಡಿಬಿಎ ಜಾಹೀರಾತು ನೀಡಿತ್ತು. ಅರಳಾಳುಸಂದ್ರ ಗ್ರಾಮದಲ್ಲಿ ಜಾಹೀರಾತು ಪ್ರತಿಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಪತ್ರಿಕೆಗಳ ಜಾಹೀರಾತು ಪ್ರತಿಗಳನ್ನು ಸುಟ್ಟು ರೈತರಿಂದ ಆಕ್ರೋಶ ವ್ಯಕ್ತಪಡಿಸಲಾಗಿದೆ. ಅಂತಿಮ ಅಧಿಸೂಚನೆಯಲ್ಲಿ ನಾಲ್ಕು ಗ್ರಾಮಗಳ ಭೂಸ್ವಾಧೀನಕ್ಕೆ ಆದೇಶಿಸಲಾಗಿದೆ. ಬನ್ನಿಗಿರಿ, ಹೊಸೂರು, ಅರಳಾಳುಸಂದ್ರ, ಕೆ.ಜಿ. ಗೊಲ್ಲರಪಾಳ್ಯ ಗ್ರಾಮಗಳಲ್ಲಿ ಭೂಸ್ವಾಧೀನಕ್ಕೆ ಮುಂದಾಗಿದೆ.
4940 ಎಕರೆ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ ಆದೇಶ ಹಿನ್ನೆಲೆಯಲ್ಲಿ ಅರಳಾಳುಸಂದ್ರದಲ್ಲಿ ಜಾಹೀರಾತು ಪ್ರತಿಗಳನ್ನು ಸುಟ್ಟು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಯೋಜನೆಗೆ ಭೂಮಿ ಕೊಡುವುದಿಲ್ಲ ಎಂದು ರೈತರು ಹೇಳಿದ್ದಾರೆ.
ಚಿತ್ರಕೃಪೆ: ಎಐ

