ಬಳ್ಳಾರಿ : ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) 2026-27 ನೇ ಸಾಲಿಗೆ ಅರ್ಹ ಖಾಸಗಿ ಅಭ್ಯರ್ಥಿಗಳಿಂದ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಡಿ.ಜಿ.ಟಿ ಮಾರ್ಗಸೂಚಿಗಳ ಪ್ರಕಾರ ಕನಿಷ್ಟ ಅರ್ಹತೆ ಅನುಭವ ಮತ್ತು ಇತರೆ ಅರ್ಹತಾ ಮಾನದಂಡಗಳನ್ನು ಪೂರೈಸುವ ಖಾಸಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
4.0 ಮತ್ತು ಅದಕ್ಕಿಂತ ಹೆಚ್ಚಿನ ಶ್ರೇಣಿಯನ್ನು (ಐಟಿಐ ಗ್ರೇಡಿಂಗ್) ಹೊಂದಿರುವ ಬಳ್ಳಾರಿ ಜಿಲ್ಲೆಯ ಸರ್ಕಾರಿ ಐ.ಟಿ.ಐ. ಗಳು ಡಿ.ಜಿ.ಟಿ ಮಾರ್ಗಸೂಚಿಗಳ ಪ್ರಕಾರ ಖಾಸಗಿ ಅಭ್ಯರ್ಥಿಗಳ ಪ್ರವೇಶಕ್ಕೆ ಅರ್ಹವಾಗಿರುತ್ತವೆ ಮತ್ತು ಸರ್ಕಾರಿ ಐ.ಟಿ.ಐ.ಗಳಲ್ಲಿ ಅರ್ಹ ಅಭ್ಯರ್ಥಿಯ ಪ್ರವೇಶವನ್ನು ಡಿ.ಜಿ.ಟಿ ಮಾರ್ಗಸೂಚಿಗಳ ಪ್ರಕಾರ ಕೈಗೊಳ್ಳಲಾಗುತ್ತದೆ.ಖಾಸಗಿ ಅರ್ಭ್ಯರ್ಥಿಗಳು ಪ್ರವೇಶ ಪಡೆಯಲು ಮಾ.20 ಕೊನೆಯ ದಿನವಾಗಿರುತ್ತದೆ.
ಅರ್ಹ ಅಭ್ಯರ್ಥಿಗಳು ಅರ್ಭ್ಯಥಿಯ ಅರ್ಹತೆ, ಭಾಗವಹಿಸುವ ಐ.ಟಿ.ಐ ಗಳ ಅರ್ಹತೆ ಪ್ರವೇಶ ಪ್ರಕ್ರಿಯೆ ಮತ್ತು ಪರೀಕ್ಷೆಗಳು ಹಾಗು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಹತ್ತಿರದ ಸರ್ಕಾರಿ ಐ.ಟಿ.ಐ ಕಾಲೇಜುಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.9448472538, 7975112905 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು 6 ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶಾತಿಗೆ ಆಯ್ಕೆ ಮಾಡಲು ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಪ್ರತಿಷ್ಠಿತ ಶಾಲೆಗಳಾದ ವಸತಿ ರಹಿತ-ಶ್ರೀ ವಿಶ್ವೇಶ್ವರಯ್ಯ ಫ್ರೌಢ ಶಾಲೆ ಅಲ್ಲೀಪುರ (ಬೆಸ್ಟ್ ಸ್ಕೂಲ್), ಶ್ರೀ ನಂದ ವಸತಿ ಶಾಲೆ ವಿದ್ಯಾನಗರ, ಶ್ರೀ ನಂದಿ ಫ್ರೌಢಶಾಲೆ (ಸಿಬಿಎಸ್ಇ) ಬೆಳಗಲ್ ಕ್ರಾಸ್. ವಸತಿ ಸಹಿತ-ವಿಜಯಮೇರಿ ಪ್ರಾಥಮಿಕ ಶಾಲೆ ಸಿರುಗುಪ್ಪ, ಬೃಂದಾ ಇಂಟರ್ ನ್ಯಾಷನಲ್ ಸ್ಕೂಲ್ ದಮ್ಮೂರು.ಪ್ರವೇಶ ಪರೀಕ್ಷೆ ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳು ಅರ್ಜಿಗಳನ್ನು ಏ.15 ರಿಂದ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಮೇ 04 ಕೊನೆಯ ದಿನ.
ಅರ್ಹತೆ
ಪರಿಶಿಷ್ಟ ಜಾತಿಯ ವಿದ್ಯಾರ್ಥಿಯಾಗಿರಬೇಕು. ಅಭ್ಯರ್ಥಿಯ ಕುಟುಂಬದ ಆದಾಯ ರೂ.02 ಲಕ್ಷ ಒಳಗಿರಬೇಕು. ಅಭ್ಯರ್ಥಿ 5ನೇ ತರಗತಿಯಲ್ಲಿ ಕನಿಷ್ಠ ಶೇ.60 ಅಂಕ ಪಡೆದಿರಬೇಕು.
ಬೇಕಾದ ದಾಖಲೆಗಳು
ವಿದ್ಯಾರ್ಥಿಯ ಆಧಾರ್ ಕಾರ್ಡ್, ದೂರವಾಣಿ ಸಂಖ್ಯೆ, ಪಾಸ್ಪೋರ್ಟ್ ಸೈಜ್ 2 ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, 5ನೇ ತರಗತಿ ಅಂಕಪಟ್ಟಿ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ, ಮುಖೋಪಾದ್ಯಾಯರಿಂದ ನಡತೆ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ.ಹೆಚ್ಚಿನ ಮಾಹಿತಿಗಾಗಿ ನಗರದ ಕೌಲ್ ಬಜಾರ್ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

