BIG NEWS : ರೇಣುಕಾಸ್ವಾಮಿ ಪತ್ನಿಗೆ ‘ಸರ್ಕಾರಿ ಉದ್ಯೋಗ’ ; ಸಿಎಂ ಸಿದ್ದರಾಮಯ್ಯ ಭರವಸೆ..!

ಬೆಂಗಳೂರು : ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪೋಷಕರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು.

ಸಿಎಂ ಸಿದ್ದರಾಮಯ್ಯ ಬಳಿ ಮಾತನಾಡಿದ ರೇಣುಕಾಸ್ವಾಮಿ ಪೋಷಕರು ‘ ನನ್ನ ಮಗ ಏನಾದ್ರೂ ತಪ್ಪು ಮಾಡಿದ್ರೆ ಕರೆದು ಬುದ್ದಿ ಹೇಳಬಹುದಿತ್ತು, ಆದರೆ ಅವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಕಣ್ಣೀರಿಟ್ಟರು.

ತಮ್ಮ ಕುಟುಂಬದ ಮುಂದಿನ ಭವಿಷ್ಯವನ್ನು ನೆನೆದು ಕಣ್ಣೀರಿಟ್ಟ ಕುಟುಂಬ ನಮ್ಮ    ಸೊಸೆಗೆ ಒಂದು ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಕೂಡ ಉದ್ಯೋಗ ನೀಡುವ ಭರವಸೆ ನೀಡಿದರು ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ರೇಣುಕಾಸ್ವಾಮಿ ಪತ್ನಿಗೆ ಪರಿಹಾರ ಕೊಡುವಂತೆ ಒತ್ತಾಯಿಸಿದ್ದರುಹಾಗೂ ಗರ್ಭಿಣಿಯಾಗಿರುವ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡುವಂತೆ ಆಗ್ರಹಿಸಿದ್ದರು.

https://twitter.com/siddaramaiah/status/1805547986392694805

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read