HomeKarnatakaಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ಒತ್ತುವರಿ ತೆರವು

ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ಒತ್ತುವರಿ ತೆರವು

ಬಳ್ಳಾರಿ: ನಗರದ ಕೌಲ್ ಬಜಾರ್ ಹಾಗೂ ಕಂಟೋನ್ಮೆಂಟ್ ಪ್ರದೇಶಗಳಲ್ಲಿ ಅನಧಿಕೃತವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಯಂತ್ರಗಳ ಮೂಲಕ ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ನಿರ್ದೇಶನದಂತೆ, ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರ ನೇತೃತ್ವದಲ್ಲಿ ಶನಿವಾರ ಬಳ್ಳಾರಿ ತಹಶೀಲ್ದಾರ್ ಟಿ.ರೇಖಾ ಮತ್ತು ಕಂದಾಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯ ಜಂಟಿ ಕಾರ್ಯಾಚರಣೆ ನಡೆಯಿತು.

ಬಳ್ಳಾರಿ ನಗರದ ಸಿಟಿಸಿ ವಾರ್ಡ್ ನಂ. 20, ಬ್ಲಾಕ್ ನಂ. 13, ಟಿಎಸ್ ನಂ. 1074 ರಲ್ಲಿ ಬರುವ ಸುಮಾರು 0.93 ಸೆಂಟ್ಸ್ ವಿಸ್ತೀರ್ಣದ ಸರ್ಕಾರಿ ಹಳ್ಳದ ಜಮೀನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸ್ಥಳದಲ್ಲಿದ್ದ ಅನಧಿಕೃತ ತಾತ್ಕಾಲಿಕ ಶೆಡ್‌ ಗಳು ಮತ್ತು ಕಟ್ಟಡಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ಕೋಟೆ ಸಮೀಪದ ಹೊಸಪೇಟೆ ರಸ್ತೆಯ ಕಂಟೋನ್ಮೆಂಟ್ ವ್ಯಾಪ್ತಿಯಲ್ಲಿರುವ ಸಿಟಿಸಿ ವಾರ್ಡ್ ನಂ. 21, ಬ್ಲಾಕ್ ನಂ. 03, ಟಿಎಸ್ ನಂ.59(ಪಿ) ರಲ್ಲಿ ಬರುವ 0.10.50 ಸೆಂಟ್ಸ್ ಸರ್ಕಾರಿ ಜಮೀನಿನ ಒತ್ತುವರಿಯನ್ನೂ ಸಹ ಅಧಿಕಾರಿಗಳ ತಂಡ ಸಮ್ಮುಖದಲ್ಲಿ ತೆರವುಗೊಳಿಸಿ, ಸರ್ಕಾರದ ವಶಕ್ಕೆ ಪಡೆಯಲಾಯಿತು.

ಎಚ್ಚರಿಕೆ ಫಲಕ ಅಳವಡಿಕೆ – ಕ್ರಿಮಿನಲ್ ಮೊಕದ್ದಮೆಯ ಎಚ್ಚರಿಕೆ:

ತೆರವುಗೊಳಿಸಲಾದ ಜಾಗಗಳಲ್ಲಿ ಅಧಿಕೃತ ಸರ್ಕಾರಿ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ. ಈ ಜಮೀನು ಸರ್ಕಾರಕ್ಕೆ ಸೇರಿದ್ದಾಗಿದ್ದು, ಮುಂದಿನ ದಿನಗಳಲ್ಲಿ ಯಾರಾದರೂ ಇದನ್ನು ಒತ್ತುವರಿ ಮಾಡಲು ಯತ್ನಿಸಿದರೆ ಅವರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಬೋರ್ಡ್ ಗಳ ಮೂಲಕ ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ.

ಕಾರ್ಯಾಚರಣೆಯ ಸಂದರ್ಭದಲ್ಲಿ ಸ್ಥಳೀಯ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕೌಲ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಇಲಾಖೆಯ ಈ ದಿಟ್ಟ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular