BIG NEWS: ನೌಕಾನೆಲೆಯ ಭೂಸ್ವಾಧೀನ ಅಧಿಕಾರಿ ಅರೆಸ್ಟ್

ಕಾರವಾರ: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪದಲ್ಲಿ ಕಾರವಾರದ ಸೀಬರ್ಡ್ ನೌಕಾನೆಲೆಯ ಭೂಸ್ವಾಧೀನ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಉಳ್ಳಿನಾಗರದಲ್ಲಿ ಸರ್ಕಾರಿ ಭೂಮಿ ಕಬಳಿಸಿದ ಆರೋಪ ಕಾರವಾರದ ಸೀಬರ್ಡ್ ನೌಕಾನೆಲೆ ಅಧಿಕಾರಿ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನೌಕಾನೆಲೆ ಅಧಿಕಾರಿ ಉಮೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಉಮೇಶ್ ಅವರನ್ನು ತಡರಾತ್ರಿ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಉಮೇಶ್ ಈ ಹಿಂದೆ ಕಡೂರು ತಹಶೀಲ್ದಾರ್ ಆಗಿದ್ದರು. ಬಳಿಕ ಕಾರವಾರ ಸೀಬರ್ಡ್ ನೌಕಾನೆಲೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read