ಬೆಂಗಳೂರು: ಚುನಾಯಿತ ಕೌನ್ಸಿಲ್ ಅವಧಿ ಮುಗಿದ ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ನ್ಯಾಯಾಲಯದಲ್ಲಿನ ಪ್ರಕರಣ ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಚುನಾವಣೆಯ ಮೂಲಕ ಚುನಾಯಿತ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗದ 42 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯಿತಿ ಸೇರಿದಂತೆ ಒಟ್ಟು 128 ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ನಗರಸಭೆಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪುರಸಭೆಗಳಿಗೆ ಉಪ ವಿಭಾಗಾಧಿಕಾರಿಗಳು, ಪಟ್ಟಣ ಪಂಚಾಯ್ತಿಗಳಿಗೆ ತಹಶೀಲ್ದಾರ್ ಅವರನ್ನು ಆಡಳಿತಾಧಿಕಾರಿಗಳಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
