HomeLatest NewsBREAKING : ರಾಜ್ಯದಲ್ಲಿ ಅವಧಿ ಮುಗಿದ  'ಗ್ರಾಮ ಪಂಚಾಯಿತಿ'ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸರ್ಕಾರ ಆದೇಶ

BREAKING : ರಾಜ್ಯದಲ್ಲಿ ಅವಧಿ ಮುಗಿದ  ‘ಗ್ರಾಮ ಪಂಚಾಯಿತಿ’ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸರ್ಕಾರ ಆದೇಶ

ಬೆಂಗಳೂರು :   ರಾಜ್ಯದಲ್ಲಿ ಅವಧಿ ಮುಗಿದ  ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು  ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸಂವಿಧಾನದ ಅನುಚ್ಛೇಧ 243-E ಉಪಬಂಧದನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 41 ಹಾಗೂ 42 ರಲ್ಲಿ ಉಪಬಂಧಿಸಿರುವಂತೆ ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರ ಅವಧಿಯು, ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು, 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ. 5 2020-2025 ರಚಿತವಾಗಿದ್ದ ರಾಜ್ಯದ ಗ್ರಾಮ ಪಂಚಾಯಿತಿಗಳ ಅವಧಿಯು 2026ನೇ ಜನವರಿ, ಫೆಬ್ರವರಿ, ಮಾರ್ಚ್ ಹಾಗೂ ಮುಂದಿನ ತಿಂಗಳುಗಳ ವಿವಿಧ ದಿನಾಂಕಗಳಂದು ಮುಕ್ತಾಯಗೊಳ್ಳುತ್ತವೆ.

2026-2031ರ ಅವಧಿಗಾಗಿ ಈ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಸದರಿ ಗ್ರಾಮ ಪಂಚಾಯಿತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 8(iii) ರನ್ವಯ ಜಿಲ್ಲಾಧಿಕಾರಿಗಳು, ಆಡಳಿತಾಧಿಕಾರಿಗಳನ್ನು ನೇಮಿಸಲು ಅವಕಾಶವಿರುತ್ತದೆ. ಇದರನ್ವಯ ಜಿಲ್ಲಾಧಿಕಾರಿಗಳು ಸಂಬಂಧ ಪಟ್ಟ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ರಚನೆಯಾಗಿರುವ ಹಾಗೂ ಮುಕ್ತಾಯಗೊಂಡಿರುವ ದಿನಾಂಕಗಳನ್ನು ಪಡೆದು ಪರಿಶೀಲಿಸಿ, ಗ್ರಾಮ ಪಂಚಾಯಿತಿಗಳು ಮುಕ್ತಾಯಗೊಳ್ಳಲಿರುವ ದಿನಾಂಕದ ಮುಂದಿನ ದಿನಾಂಕದಿಂದ ಜಾರಿಗೆ ಬರುವಂತೆ ಆಡಳಿತಾಧಿಕಾರಿಗಳನ್ನು ನೇಮಿಸಿ ಅಧಿಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲು ನಾನು ನಿರ್ದೇಶಿಸಲ್ಪಟ್ಟಿದ್ದೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular