ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೆ ಮೂರು ನಿಗಮ, ಮಂಡಳಿ, ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನಟರಾಜ ಗೌಡ, ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ನಾಗೇಂದ್ರ ಕುಮಾರ್, ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾಗಿ ಎನ್. ರಂಗಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
