ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರ ನೇಮಕ ಮಾಡಿದ್ದು, ಅನಾರೋಗ್ಯ ಮತ್ತಿತರ ಕಾರಣಗಳಿಂದ ಧ್ವಜಾರೋಹಣಕ್ಕೆ ನಿಯೋಜಿಸಲಾದ ಸಚಿವರು ಕಾರ್ಯಕ್ರಮಕ್ಕೆ ಗೈರುಹಾಜರಾದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸೂಚನೆ ನೀಡಲಾಗಿದೆ.
ತುಮಕೂರು ಜಿಲ್ಲೆಗೆ ಡಾ.ಜಿ. ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ. ಪಾಟೀಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೆ.ಹೆಚ್. ಮುನಿಯಪ್ಪ, ಬೆಂಗಳೂರು ದಕ್ಷಿಣ ಜಿಲ್ಲೆಗೆ ರಾಮಲಿಂಗಾರೆಡ್ಡಿ, ವಿಜಯಪುರ ಜಿಲ್ಲೆಗೆ ಎಂ.ಬಿ. ಪಾಟೀಲ್, ಅವರನ್ನು ಧ್ವಜಾರೋಹಣ ನೆರವೇರಿಸಲು ನಿಯೋಜಿಸಲಾಗಿದೆ.


