ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನದ ದಿನ ಏಪ್ರಿಲ್ 9ರಂದು ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಉಪಚುನಾವಣೆ ನಡೆಯುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಮಾತ್ರ ಈ ರಜೆ ಅನ್ವಯವಾಗಲಿದೆ.
ಎರಡೂ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಶಾಲಾ-ಕಾಲೇಜುಗಳು, ರಾಷ್ಟ್ರೀಕೃತ ಬ್ಯಾಂಕುಗಳು, ಜೀವ ವಿಮಾ ನಿಗಮ, ಹಣಕಾಸು ಸಂಸ್ಥೆಗಳು ಮತ್ತು ಇತರೆ ಶಾಸನಬದ್ಧ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

