HomeLatest Newsಉದ್ಯೋಗ ವಾರ್ತೆ : ರಾಜ್ಯದಲ್ಲಿ 500 'ಗ್ರಾಮ ಆಡಳಿತ ಅಧಿಕಾರಿ' ಹುದ್ದೆಗಳ...

ಉದ್ಯೋಗ ವಾರ್ತೆ : ರಾಜ್ಯದಲ್ಲಿ 500 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ನೇರ ನೇಮಕಾತಿಗೆ  ಸರ್ಕಾರ ಆದೇಶ |V.A Recruitment 2026

ಬೆಂಗಳೂರು : 2025-26 ನೇ ಸಾಲಿನಲ್ಲಿ ರಾಜ್ಯದಲ್ಲಿ ಖಾಲಿ ಇರುವ 500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಲ್ಲಿ 2025-26 ನೇ ಸಾಲಿನಲ್ಲಿ 500 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ.
ಆದ್ದರಿಂದ ಈ ಕುರಿತು ಪರಿಶೀಲಿಸಿ, ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಗ್ರಾಮ ಆಡಳಿತ ಅಧಿಕಾರಿ ವೃಂದಕ್ಕೆ ಸಂಬಂಧಿಸಿದಂತೆ ಕೆಳಕಂಡ ಅಂಶಗಳಿಗೆ ಜಿಲ್ಲಾವಾರು ಮಾಹಿತಿಯನ್ನು :07.01.2026 ರೊಳಗಾಗಿ ಸಲ್ಲಿಸುವಂತೆ ಕೂಡಲೇ ನೀಡುವಂತೆ ತಮ್ಮನ್ನು ಕೋರಲು ನಿರ್ದೇಶಿತನಾಗಿದ್ದೇನೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular