HomeLatest NewsBREAKING : ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಚಿವ ರಾಮಚಂದ್ರಗೌಡ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ.!

BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಚಿವ ರಾಮಚಂದ್ರಗೌಡ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಕರ್ನಾಟಕದ ಮಾಜಿ ಸಚಿವ ಶ್ರೀ ರಾಮಚಂದ್ರಗೌಡ ಅವರು ಮಂಗಳವಾರ (ಜುಲೈ 14, 2026) ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಅಧಿಕೃತ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಅಧೀನ ಕಾರ್ಯದರ್ಶಿ-1(ಪ್ರು) ಬಾಣದರಂಗಯ್ಯ ಎನ್.ಆರ್. ಅವರು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ.

ಸರ್ಕಾರದ ಆದೇಶದಂತೆ, ಮಾಜಿ ಸಚಿವ ರಾಮಚಂದ್ರಗೌಡ ಅವರ ಅಂತ್ಯಕ್ರಿಯೆಯನ್ನು ರಾಜ್ಯ ಸರ್ಕಾರದ ಶಿಷ್ಟಾಚಾರದಂತೆ ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ವೇಳೆ, ಸರ್ಕಾರದ ಮುಖ್ಯಕಾರ್ಯದರ್ಶಿ, ಮುಖ್ಯಮಂತ್ರಿ ಕಚೇರಿ ಸೇರಿದಂತೆ ಸಂಬಂಧಿತ ಹಿರಿಯ ಅಧಿಕಾರಿಗಳಿಗೆ ಮಾಹಿತಿಗಾಗಿ ಅಧಿಸೂಚನೆಯ ಪ್ರತಿಗಳನ್ನು ಕಳುಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿ.ವೈ ವಿಜಯೇಂದ್ರ ಸೇರಿ ಹಲವು ಗಣ್ಯರಿಂದ ಸಂತಾಪ

ಪಕ್ಷದ ಹಿರಿಯ ನಾಯಕರು, ಮಾರ್ಗದರ್ಶಕರು, ಮಾಜಿ ಸಚಿವರು, ಸುಮಾರು ಮೂರು ದಶಕಗಳ ಕಾಲ ಬೆಂಗಳೂರು ಪದವೀಧರರ ಕ್ಷೇತ್ರವನ್ನು ಸಮರ್ಥವಾಗಿ ಪ್ರತಿನಿಧಿಸಿ ಆದರ್ಶಪ್ರಾಯ ಶಾಸಕರಾಗಿದ್ದ ಧೀಮಂತ ನೇತಾರ ಶ್ರೀ ರಾಮಚಂದ್ರ ಗೌಡರು ವಿಧಿವಶರಾದ ಸುದ್ದಿ ಅತೀವ ಆಘಾತ ಹಾಗೂ ದುಃಖವನ್ನು ಉಂಟು ಮಾಡಿದೆ. ಸಂಘದ ಸ್ವಯಂಸೇವಕರಾಗಿ ಸಾರ್ವಜನಿಕ ಜೀವನ ಆರಂಭಿಸಿ, ಜನಸಂಘದ ದಿನಗಳಿಂದಲೂ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ದುಡಿದ ಶ್ರೀ ರಾಮಚಂದ್ರ ಗೌಡರ ನಿಧನದಿಂದ ಪಕ್ಷ ತನ್ನ ಹಿರಿಯ ನಾಯಕನನ್ನು ಕಳೆದುಕೊಂಡಿದ್ದು ಭರಿಸಲಾಗದ ನಷ್ಟವಾಗಿದೆ. ಬೆಂಗಳೂರು ಪಾಲಿಕೆ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಸಚಿವರಾಗಿ ಜನಸಾಮಾನ್ಯರ ಧ್ವನಿಯಾಗಿ ಅವರು ಸಲ್ಲಿಸಿದ ಸುದೀರ್ಘ ಸೇವೆ ಆದರ್ಶಪ್ರಾಯವಾದದ್ದು. ಜೊತೆಗೆ ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ, ಬೆಳೆಸುವಲ್ಲಿ ಅವರು ವಹಿಸಿದ ಮಹತ್ತರ ಪಾತ್ರ ಮತ್ತು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಪೂಜ್ಯ ತಂದೆ ಶ್ರೀ ಬಿ.ಎಸ್.ಯಡಿಯೂರಪ್ಪನವರ ಆಪ್ತ ಒಡನಾಡಿಯಾಗಿದ್ದ ಅವರನ್ನು ಹತ್ತಿರದಿಂದಲೂ ನಾನು ಕಂಡಿದ್ದೇನೆ. ಅವರ ಆಡಳಿತಾತ್ಮಕ ದಕ್ಷತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಪ್ರೇರಣಾದಾಯಿ, ಅವರ ಆತ್ಮೀಯತೆ, ಮಾರ್ಗದರ್ಶನಗಳು ಅವಿಸ್ಮರಣೀಯ. ಒಬ್ಬ ಸಹೃದಯಿ ಮತ್ತು ಅಜಾತಶತ್ರು ನಾಯಕರಾಗಿದ್ದ ಅವರನ್ನು ಕಳೆದುಕೊಂಡಿರುವುದು ವೈಯಕ್ತಿಕವಾಗಿ ಕೂಡ ನನಗೆ ಅತ್ಯಂತ ನೋವನ್ನುಂಟು ಮಾಡಿದೆ. ಹಿರಿಯರಾದ ಶ್ರೀ ರಾಮಚಂದ್ರ ಗೌಡರ ನಿಧನದಿಂದ ರಾಜ್ಯ ರಾಜಕಾರಣದ ಅತ್ಯಂತ ಹಿರಿಯ ಮತ್ತು ಗೌರವಾನ್ವಿತ ಕೊಂಡಿಯೊಂದು ಕಳಚಿದಂತಾಗಿದೆ. ದೇವರು ಆ ಹಿರಿಯ ಚೇತನಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಪುತ್ರ ಶ್ರೀ ಸಪ್ತಗಿರಿ ಗೌಡ ಹಾಗೂ ಅವರ ಸಮಸ್ತ ಕುಟುಂಬ ವರ್ಗದವರಿಗೆ, ಅಪಾರ ಅಭಿಮಾನಿಗಳಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಹಿರಿಯರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular