HomeKarnatakaಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಋತುಚಕ್ರ ರಜೆ ಮಂಜೂರು ಮಾಡಿ ಸರ್ಕಾರ ಆದೇಶ

ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಋತುಚಕ್ರ ರಜೆ ಮಂಜೂರು ಮಾಡಿ ಸರ್ಕಾರ ಆದೇಶ

ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸರ್ಕಾರದಲ್ಲಿ ಹಾಗೂ ಸರ್ಕಾರದ ಅಂಗ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಗರಿಷ್ಠ ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ವಿಸ್ತರಿಸಲಾಗಿದೆ.

ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಹಾಗೂ ಅಂಗ ಸಂಸ್ಥೆಗಳಾದ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ (on Conrtact) ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಗರಿಷ್ಠ ಒಂದು ದಿನದಂತೆ ವಾರ್ಷಿಕ ಗರಿಷ್ಠ 12 ದಿನಗಳ ವೇತನಸಹಿತ ಋತುಚಕ್ರ ರಜೆಯ ಸೌಲಭ್ಯವನ್ನು ಕೆಳಕಂಡ ಷರತ್ತುಗೊಳಪಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿ ಆದೇಶಿಸಿದೆ.

1. ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಹಾಗೂ ಅಂಗ ಸಂಸ್ಥೆಗಳಾದ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ (on contract) ಕರ್ತವ್ಯ ನಿರ್ವಹಿಸುತ್ತಿರುವ 18 ರಿಂದ 52 ವಯಸ್ಸಿನ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಈ ರಜೆಯನ್ನು ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.

3. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.

4. ಈ ರಜೆಯನ್ನು ಬೇರೆ ಯಾವುದೇ ರಜೆಯೊಡನೆ ಸಂಯೋಜಿಸತಕ್ಕದ್ದಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular