HomeLatest NewsBIG NEWS : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರು & ಮಕ್ಕಳ ಕಾವಲು ಸಮಿತಿ...

BIG NEWS : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರು & ಮಕ್ಕಳ ಕಾವಲು ಸಮಿತಿ ರಚನೆ ಕಡ್ಡಾಯ : ಸರ್ಕಾರ ಆದೇಶ


ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರು & ಮಕ್ಕಳ ಕಾವಲು ಸಮಿತಿ ರಚನೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆವಹಿಸಬೇಕಿದ್ದು ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳೂ ಕೂಡ ಮಹಿಳೆಯರು ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಹಾಗೂ ಶಿಕ್ಷಣ ಕಾರ್ಯಪಡೆ ರಚಿಸಿ ನಿಯಮಿತವಾಗಿ ಸಭೆ ನಡೆಸಿ ಮಕ್ಕಳ ಹಕ್ಕುಗಳ ರಕ್ಷಣೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ, ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾಗಿರುವ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಹಾಗೂ ಶಿಕ್ಷಣ ಕಾರ್ಯಪಡೆ ಸಮಿತಿಗಳ ನಿಯಮಿತವಾಗಿ ಸಭೆ ನಡೆಸುವಂತೆ ಕ್ರಮಕೈಗೊಳ್ಳಲು ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular