HomeLatest NewsBIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ  ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ...

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ  ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ

ಬೆಂಗಳೂರು :   ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ  ‘ರಾಷ್ಟ್ರೀಯ ಮತದಾರರ ದಿನ’ ಆಚರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಅಧೀನ ಕಛೇರಿಗಳಲ್ಲಿ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಹಾಗೂ ಇದರೊಂದಿಗೆ ಲಗತ್ತಿಸಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಯ Logo ವನ್ನು ಅಧಿಕೃತ ಸ್ಟೇಷನರಿ, ಸರಕು, ವೆಬ್‌ಸೈಟ್‌ಗಳಲ್ಲಿ ಸೂಕ್ತವಾಗಿ ಉಪಯೋಗಿಸುವಂತೆ ಹಾಗೂ #NVD2026 ಹ್ಯಾಶ್‌ಟ್ಯಾಗ್ ಉಪಯೋಗಿಸಿ ಈ ದಿನಾಚರಣೆಗೆ ಸಂಬಂಧಿಸಿದಂತೆ ನಡೆಸುವ ಚಟುವಟಿಕೆಗಳ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಾಧ್ಯವಾದಲ್ಲಿ ಚಿತ್ರಗಳನ್ನು ಅಪ್‌ಲೋಡ್ ಮಾಡುವಂತೆ ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆಗಳನ್ನು ತಪ್ಪದೇ ನೀಡುವಂತೆ ಸೂಚಿಸಲಾಗಿದೆ.

ಏನಿದೆ ಆದೇಶದಲ್ಲಿ..?

ಪ್ರತಿ ವರ್ಷವೂ ಜನವರಿ 25 ನೇ ತಾರೀಖಿನಂದು “ರಾಷ್ಟ್ರೀಯ ಮತದಾರರ ದಿನಾಚರಣೆ” ಯ ಪ್ರತಿಜ್ಞಾ ಬೋಧನಾ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಆದರೆ ಈ ಬಾರಿ ಜನವರಿ 25 ನೇ ತಾರೀಖಿನಂದು ಸಾರ್ವತ್ರಿಕ ರಜಾ ದಿನವಾದ್ದರಿಂದ, ಈ ವರ್ಷ ಜನವರಿ 23, 2026 ರ ಶುಕ್ರವಾರದಂದು ” ರಾಷ್ಟ್ರೀಯ ಮತದಾರರ ದಿನಾಚರಣೆ” ಆಚರಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ, ಸದರಿ ದಿನದಂದು, ತಮ್ಮ ಅಧೀನ ಕಛೇರಿಗಳಲ್ಲಿಯೂ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಹಾಗೂ ಇದರೊಂದಿಗೆ ಲಗತ್ತಿಸಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಯ Logo ವನ್ನು ಅಧಿಕೃತ ಸ್ಟೇಷನರಿ, ಸರಕು, ವೆಬ್‌ಸೈಟ್‌ಗಳಲ್ಲಿ ಸೂಕ್ತವಾಗಿ ಉಪಯೋಗಿಸುವಂತೆ ಹಾಗೂ #NVD2026 ಹ್ಯಾಶ್‌ಟ್ಯಾಗ್ ಉಪಯೋಗಿಸಿ ಈ ದಿನಾಚರಣೆಗೆ ಸಂಬಂಧಿಸಿದಂತೆ ನಡೆಸುವ ಚಟುವಟಿಕೆಗಳ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಾಧ್ಯವಾದಲ್ಲಿ ಚಿತ್ರಗಳನ್ನು ಅಪ್‌ಲೋಡ್ ಮಾಡುವಂತೆ ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆಗಳನ್ನು ತಪ್ಪದೇ ನೀಡುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ. “ರಾಷ್ಟ್ರೀಯ ಮತದಾರರ ದಿನಾಚರಣೆ” ಯ ಪ್ರತಿಜ್ಞಾವಿಧಿಯ ಕನ್ನಡ ಅವತರಣಿಕೆಯ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular