ಬೆಂಗಳೂರು: ಬೌದ್ಧ ಬಿಕ್ಕುಗಳಿಗೆ ಮಾಸಿಕ ಆರು ಸಾವಿರ ರೂ. ಗೌರವಧನ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೌದ್ಧ ಬಿಕ್ಕುಗಳ ಜೀವನ ನಿರ್ವಹಣೆಗೆ ಮಾಸಿಕ ಗೌರವಧನ ನೀಡುವಂತೆ ವಿಧಾನಪರಿಷತ್ ಸದಸ್ಯ ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಅವರು ಸರ್ಕಾರದ ಗಮನ ಸೆಳೆದಿದ್ದರು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026 27ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು.
ಅಂತೆಯೇ ಮಂಗಳವಾರ ಸರ್ಕಾರ ರಾಜ್ಯದಲ್ಲಿರುವ ಬುದ್ಧ ವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳ ದೈನಂದಿನ ಜೀವನ ನಿರ್ವಹಣೆಗೆ ಮಾಸಿಕ ಆರು ಸಾವಿರ ರೂ. ಗೌರವಧನ ವಿತರಣೆಗೆ ಆದೇಶ ಹೊರಡಿಸಿದೆ. ಇದಕ್ಕಾಗಿ ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

