HomeLatest Newsರಾಜ್ಯದ 8 ಜಿಲ್ಲಾಸ್ಪತ್ರೆಗಳಲ್ಲಿ ಎಂಡಿ/ಎಂಎಸ್ ಕೋರ್ಸ್ ಪ್ರಾರಂಭಿಸಲು ಸರ್ಕಾರ ಆದೇಶ

ರಾಜ್ಯದ 8 ಜಿಲ್ಲಾಸ್ಪತ್ರೆಗಳಲ್ಲಿ ಎಂಡಿ/ಎಂಎಸ್ ಕೋರ್ಸ್ ಪ್ರಾರಂಭಿಸಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ 8 ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ 2026- 27ನೇ ಶೈಕ್ಷಣಿಕ ಸಾಲಿನಿಂದ ಎಂಡಿ/ ಎಂಎಸ್ ಕೋರ್ಸ್ ಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರಿನ ಜಯನಗರದ ಸಾರ್ವಜನಿಕ ಆಸ್ಪತ್ರೆ, ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆ, ವಿಜಯಪುರ, ತುಮಕೂರು, ಬಾಗಲಕೋಟೆ, ರಾಮನಗರ, ಕೋಲಾರ, ಮೈಸೂರು ಜಿಲ್ಲಾಸ್ಪತ್ರೆಗಳಲ್ಲಿ ಎಂಡಿ/ ಎಂಎಸ್ ಕೋರ್ಸ್ ಗಳನ್ನು ಪ್ರಾರಂಭಿಸಲು ಅರ್ಹವಾಗಿವೆ.

ಇದರ ಸಂಪೂರ್ಣ ಸಂಯೋಜನೆ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಿಗೆ ನೀಡಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯು ಬೋಧಕ ವರ್ಗದ ಹುದ್ದೆ ಸಮಾನತೆ, ಡಿಎನ್‌ಬಿ ಉಪನ್ಯಾಸಕರ ಬಳಕೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗ ಮೂಲಕ ಎನ್ಒಸಿ ಮತ್ತು ಪರಿಶೀಲನೆ ಪ್ರಕ್ರಿಯೆಗಳಿಗೆ ಅನುಕೂಲವಾಗುವಂತೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular