HomeKarnatakaBIG NEWS: ವಕ್ಫ್ ವಿವಾದದ ಬೆನ್ನಲ್ಲೇ ದೇವಾಲಯಗಳ ಆಸ್ತಿ ರಕ್ಷಣೆಗೆ ಮುಂದಾದ ಸರ್ಕಾರ

BIG NEWS: ವಕ್ಫ್ ವಿವಾದದ ಬೆನ್ನಲ್ಲೇ ದೇವಾಲಯಗಳ ಆಸ್ತಿ ರಕ್ಷಣೆಗೆ ಮುಂದಾದ ಸರ್ಕಾರ

ಬೆಂಗಳೂರು: ವಕ್ಫ್ ವಿವಾದದ ಬೆನ್ನಲ್ಲೇ ದೇವಾಲಯಗಳ ಆಸ್ತಿ ಸಂರಕ್ಷಣೆಗೆ ಸರ್ಕಾರ ಮುಂದಾಗಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಗಳನ್ನು ಸರ್ವೆ ಮಾಡಿ ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಮತ್ತು ಸಂರಕ್ಷಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಮತ್ತು ಅವಧಿ ಮುಗಿದ ನಂತರ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅರ್ಜಿ ಸ್ವೀಕಾರವಾಗದೆ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ತೀರ್ಮಾನ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular