HomeKarnatakaಶುಭ ಸುದ್ದಿ: 2000 ಪವರ್ ಮೆನ್ ಗಳ ನೇಮಕಾತಿಗೆ ಅಧಿಸೂಚನೆ ಶೀಘ್ರ

ಶುಭ ಸುದ್ದಿ: 2000 ಪವರ್ ಮೆನ್ ಗಳ ನೇಮಕಾತಿಗೆ ಅಧಿಸೂಚನೆ ಶೀಘ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಹೊಸದಾಗಿ 2000 ಪವರ್ ಮೆನ್ ಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್ 20008 ಪವರ್ ಮೆನ್ ಗಳ ನೇಮಕಾತಿಗೆ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರಾವಳಿ, ಮಲೆನಾಡಿನಲ್ಲಿ ಮಳೆಗಾಲದಲ್ಲಿ ವಿದ್ಯುತ್ ಕಂಬ ದುರಸ್ತಿ ಸವಾಲಿನ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಮಲೆನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಸಿಬ್ಬಂದಿ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ತುರ್ತು ಕಾಮಗಾರಿಗಳಿಗೆ ಹೆಚ್ಚುವರಿ ಸಿಬ್ಬಂದಿ ಮತ್ತು ಗುತ್ತಿಗೆದಾರರ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular