HomeKarnatakaಸದ್ಯದಲ್ಲಿಯೇ ಸರ್ಕಾರಿ ನೇಮಕಾತಿ ಪ್ರಾರಂಭ: ಸಿಎಂ ಸಿದ್ಧರಾಮಯ್ಯ ಘೋಷಣೆ

ಸದ್ಯದಲ್ಲಿಯೇ ಸರ್ಕಾರಿ ನೇಮಕಾತಿ ಪ್ರಾರಂಭ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮೈಸೂರು: ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಟೀಕಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸದ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular