ಗ್ಯಾರಂಟಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಸಿಹಿ ಸುದ್ದಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಕಡಿತವನ್ನೂ ಮಾಡುವುದಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಗ್ಯಾರಂಟಿ ಯೋಜನೆ ಪರಿಷ್ಕರಣೆ ಕುರಿತಾದ ಎಲ್ಲಾ ಗೊಂದಲಗಳಿಗೆ ಸಿಎಂ ತೆರೆ ಎಳೆದಿದ್ದಾರೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ಕಳೆದ ಎರಡು ದಿನಗಳಿಂದ ಗ್ಯಾರಂಟಿ ಪರಿಷ್ಕರಣೆ ಕುರಿತಾದ ಚರ್ಚೆಗಳ ಬಗ್ಗೆ ತೆರೆಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನಮ್ಮ ಸರ್ಕಾರ ಆರ್ಥಿಕ ಭದ್ರತೆ ಒದಗಿಸಿದೆ. ಗ್ಯಾರಂಟಿ ಯೋಜನೆಗಳು ಆರ್ಥಿಕ ಅಸಮಾನತೆಯಿಂದ ಬಸವಳಿದ ಜನರಿಗೆ ನೆಮ್ಮದಿ ತಂದಿದ್ದು, ಈ ಯೋಜನೆಗಳನ್ನು ಪರಿಷ್ಕರಿಸುವ, ಬದಲಾಯಿಸುವ ಅಥವಾ ನಿಲ್ಲಿಸುವ ಯಾವ ಚಿಂತನೆಯೂ ಸರ್ಕಾರಕ್ಕೆ ಇಲ್ಲ. ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯಲಿವೆ ಎಂದು ಘೋಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read