HomeKarnatakaಸಮಗ್ರ ಶಿಕ್ಷಣ ಅನುದಾನ ಬಳಸಿಕೊಂಡು ಮಾರ್ಚ್ ವರೆಗಿನ ವಿದ್ಯುತ್, ನೀರಿನ ಶುಲ್ಕ ಭರಿಸಲು ಶಾಲಾ-ಕಾಲೇಜುಗಳಿಗೆ ಸೂಚನೆ

ಸಮಗ್ರ ಶಿಕ್ಷಣ ಅನುದಾನ ಬಳಸಿಕೊಂಡು ಮಾರ್ಚ್ ವರೆಗಿನ ವಿದ್ಯುತ್, ನೀರಿನ ಶುಲ್ಕ ಭರಿಸಲು ಶಾಲಾ-ಕಾಲೇಜುಗಳಿಗೆ ಸೂಚನೆ

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅನುದಾನ ಬಳಸಿಕೊಂಡು 2024ರ ಮಾರ್ಚ್ ವರೆಗಿನ ವಿದ್ಯುತ್ ಮತ್ತು ನೀರಿನ ಶುಲ್ಕವನ್ನು ಭರಿಸುವಂತೆ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.

ಸಮಗ್ರ ಶಿಕ್ಷಣ ಕರ್ನಾಟಕದ ನಿರ್ದೇಶಕರು ಈ ಬಗ್ಗೆ ಸೂಚನೆ ನೀಡಿದ್ದು, ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಏಪ್ರಿಲ್ 1ರಿಂದ ಉಚಿತ ವಿದ್ಯುತ್, ನೀರು ಪೂರೈಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಈಗಾಗಲೇ ಆದೇಶ ಹೊರಡಿಸಲಾಗಿದೆ,

2024 -25 ನೇ ಸಾಲಿನಿಂದ ವಿದ್ಯುತ್ ಮತ್ತು ನೀರಿಗೆ ಅಗತ್ಯವಾದ ವಾರ್ಷಿಕ ವೆಚ್ಚದ ಪ್ರಸ್ತಾಪವನ್ನು ಇಂಧನ ಮತ್ತು ನಗರಾಭಿವೃದ್ಧಿ ಇಲಾಖೆಗಳು ನೇರವಾಗಿ ಆರ್ಥಿಕ ಇಲಾಖೆಗೆ ಸಲ್ಲಿಸಿ ಅಗತ್ಯ ಅನುದಾನ ಪಡೆದುಕೊಳ್ಳಲಿವೆ. ಮಾರ್ಚ್ ವರೆಗಿನ ವಿದ್ಯುತ್ ಮತ್ತು ನೀರಿನ ಶುಲ್ಕವನ್ನು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅನುದಾನ ಬಳಸಿಕೊಂಡು ಭರಿಸುವಂತೆ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular