ದಾಖಲಾತಿ ಹೆಚ್ಚಳಕ್ಕೆ ಮತ್ತಷ್ಟು ಸರ್ಕಾರಿ ಶಾಲೆಗಳಲ್ಲಿ ಕನ್ನಡ, ಇಂಗ್ಲಿಷ್ ಮಾಧ್ಯಮ ಆರಂಭ

ಬೆಂಗಳೂರು: ಸರ್ಕಾರಿ ಶಾಲೆಗಳ ಸಬಲೀಕರಣ, ದಾಖಲಾತಿ ಹೆಚ್ಚಳ ಉದ್ದೇಶದಿಂದ ರಾಜ್ಯದೆಲ್ಲೆಡೆ ಉತ್ತಮ ಸೌಲಭ್ಯ ಹೊಂದಿರುವ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಮತ್ತು ಒಂದನೇ ತರಗತಿಯಲ್ಲಿ ಕನ್ನಡ, ಇಂಗ್ಲಿಷ್ ದ್ವಿಮಾಧ್ಯಮ ಆರಂಭಿಸಲು ಸಿದ್ಧತೆ ನಡೆಸಲಾಗಿದೆ.

ಪ್ರಸ್ತುತ 283 ಕರ್ನಾಟಕ ಪಬ್ಲಿಕ್ ಸ್ಕೂಲ್ ಸೇರಿ 2686 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ತರಗತಿ ನಡೆಸುತ್ತಿದ್ದು, ಇದರೊಂದಿಗೆ ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.

ಉತ್ತಮ ಗುಣಮಟ್ಟದ ತಂತ್ರಜ್ಞಾನ ಆಧಾರಿತ ಕಲಿಕೆ, ಲೈಬ್ರರಿ, ಆಟದ ಮೈದಾನ, ಪ್ರಯೋಗಾಲಯ, ಬೋಧನಾ, ಕಲಿಕಾ ವಾತಾವರಣ, ಆಂಗ್ಲ ಭಾಷೆ ಬಳಕೆ ಕೊರತೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಕುಂಠಿತವಾಗದಂತೆ ಶೈಕ್ಷಣಿಕ ಅವಶ್ಯಕತೆಗಳನ್ನು ನೀಗಿಸಲು ಸಮೀಕ್ಷೆ ನಡೆಸಿ ಪರಿಶೀಲಿಸಿದ್ದು ಇದಕ್ಕೆ ಅನುಗುಣವಾಗಿ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಫೆಬ್ರವರಿ 28ರ ವರೆಗೆ ಉತ್ತಮ ಸೌಲಭ್ಯ ಹೊಂದಿದ ಶಾಲೆಗಳು ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದಾರೆ. ಹಾಲಿ ಇರುವ ಕನ್ನಡ ಇತರೆ ಮಾಧ್ಯಮಗಳ ಜೊತೆಗೆ ಹೊಸದಾಗಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ವಿಭಾಗ ದ್ವಿಭಾಷಾ ಮಾಧ್ಯಮ ತೆರೆಯುವ ಕುರಿತು ಪ್ರಸ್ತಾವನೆ ಸಲ್ಲಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read