HomeIndiaಯೂಟ್ಯೂಬ್ ಸೇರಿ ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಕ್ರಿಯೇಟರ್ಸ್ ಗಳಿಗೆ ‘ರಾಷ್ಟ್ರೀಯ ಪ್ರಶಸ್ತಿ’ ಘೋಷಣೆ

ಯೂಟ್ಯೂಬ್ ಸೇರಿ ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಕ್ರಿಯೇಟರ್ಸ್ ಗಳಿಗೆ ‘ರಾಷ್ಟ್ರೀಯ ಪ್ರಶಸ್ತಿ’ ಘೋಷಣೆ

ನವದೆಹಲಿ: ಹೊಸ ಯುಗದ ಪ್ರಭಾವಿಗಳು, ಕ್ರಿಯೇಟರ್ಸ್ ಗಳನ್ನು ಗುರುತಿಸಲು ರಾಷ್ಟ್ರೀಯ ಕ್ರಿಯೇಟರ್ಸ್ ಪ್ರಶಸ್ತಿ(National creators’ awards) ಗಳನ್ನು ಘೋಷಿಸಲು ಸರ್ಕಾರ ಸಜ್ಜಾಗಿದೆ.

ಮೊದಲ-ರೀತಿಯ ಪ್ರಶಸ್ತಿಗಳನ್ನು “Gen Z” ಅನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಇದು ಯುವ ಪೀಳಿಗೆಯನ್ನು ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಕ್ಕೆ ಕೊಂಡಿಯಾಗಿರಿಸಿಕೊಂಡಿದ್ದು, ಸುಮಾರು 20 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಅವರು ಹೇಳಿದರು.

ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಪ್ರಶಸ್ತಿಗಾಗಿ ಸ್ಪರ್ಧೆಯಲ್ಲಿರುತ್ತಾರೆ. ದೇಶದ ಸಾಫ್ಟ್ ಪವರ್ ಮತ್ತು ಸಂಸ್ಕೃತಿಯನ್ನು ಅಂತರಾಷ್ಟ್ರೀಯವಾಗಿ ಹರಡಲು ಸಹಾಯ ಮಾಡಿದವರಿಗೆ ಒಂದು ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತರ ವಿಭಾಗಗಳು “ಗ್ರೀನ್ ಚಾಂಪಿಯನ್ಸ್”, “ಸ್ವಚ್ಛತಾ ರಾಯಭಾರಿಗಳು”, “ಕೃಷಿ ಸೃಷ್ಟಿಕರ್ತರು” ಮತ್ತು “ಟೆಕ್ ಕ್ರಿಯೇಟರ್ಸ್” ಅನ್ನು ಒಳಗೊಂಡಿರಬಹುದು ಎಂದು ಮೂಲಗಳು ತಿಳಿಸಿವೆ. ವಿವಿಧ ಭಾಷೆ ಮತ್ತು ವಿಭಾಗಗಳ ಚಲನಚಿತ್ರಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಮಾದರಿಯಲ್ಲಿ ಪ್ರಶಸ್ತಿಗಳು ಇರುತ್ತವೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular