HomeLatest Newsಶಾಲೆ ನೀರಿನ ಟ್ಯಾಂಕ್ ಗೆ ವಿಷ ಕೇಸ್ ಗಂಭೀರವಾಗಿ ಪರಿಗಣಿಸಿದ ಸರ್ಕಾರ: ಯಾವ ಭಯೋತ್ಪಾದಕ ಕೃತ್ಯಕ್ಕೂ...

ಶಾಲೆ ನೀರಿನ ಟ್ಯಾಂಕ್ ಗೆ ವಿಷ ಕೇಸ್ ಗಂಭೀರವಾಗಿ ಪರಿಗಣಿಸಿದ ಸರ್ಕಾರ: ಯಾವ ಭಯೋತ್ಪಾದಕ ಕೃತ್ಯಕ್ಕೂ ಕಡಿಮೆಯಿಲ್ಲ: ಕ್ರಮಕ್ಕೆ ಸೂಚಿಸಿದ ಸಿಎಂ ಹೇಳಿಕೆ

ಬೆಂಗಳೂರು: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ ಎಂದು ಹೇಳಿದ್ದಾರೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular