HomeKarnataka40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಉಚಿತ ದೃಷ್ಟಿ ಪರೀಕ್ಷೆ, ಕನ್ನಡಕ ವಿತರಣೆ

40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಉಚಿತ ದೃಷ್ಟಿ ಪರೀಕ್ಷೆ, ಕನ್ನಡಕ ವಿತರಣೆ

ಬೆಂಗಳೂರು: ರಾಜ್ಯದಲ್ಲಿ 40 ವರ್ಷ ಮೇಲ್ಪಟ್ಟವರಿಗೆ ಉಚಿತ ದೃಷ್ಟಿ ತಪಾಸಣೆ ಮತ್ತು ಓದುವ ಕನ್ನಡಕಗಳನ್ನು ಒದಗಿಸುವ ಕಾರ್ಯಕ್ರಮ ಜಾರಿಗೊಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ರಿಸ್ಟೋರಿಂಗ್ ಮಿಷನ್ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಆಯುಷ್ಮಾನ್ ಆರೋಗ್ಯ ಮಂದಿರ ಉಪ ಕೇಂದ್ರಗಳ ಮೂಲಕ ಈ ಕಾರ್ಯಕ್ರಮ ಜಾರಿಗೆ ತರಲು ಉದ್ದೇಶಿಸಲಾಗಿದೆ. ಮೊದಲ ಹಂತದಲ್ಲಿ ಯಾದಗಿರಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ 2025ರ ಅಕ್ಟೋಬರ್ ನಲ್ಲಿ ಆಶಾಕಿರಣ ಯೋಜನೆಯಡಿ ಕ್ಷೇತ್ರ ಮೌಲ್ಯಮಾಪನ ಮಾಡಲಾಗಿತ್ತು. ಈ ವೇಳೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಳಗೊಂಡ ಜಂಟಿ ತಂಡ ಮಾಡಿದ ಶಿಫಾರಸುಗಳ ಆಧರಿಸಿ ಕಾರ್ಯಕ್ರಮ ರೂಪಿಸಲಾಗಿದೆ.

ಈ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ತಪಾಸಣೆ ನಡೆಸಲಿದ್ದಾರೆ. ಮುಂದಿನ ಹಂತಗಳಲ್ಲಿ ರಾಜ್ಯಾದ್ಯಂತ ಯೋಜನೆ ವಿಸ್ತರಿಸಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular