BIG NEWS: ಹೆದ್ದಾರಿಗಳಲ್ಲಿ ಉಪಗ್ರಹ ಆಧಾರಿತ GPS ಟೋಲ್ ಸಂಗ್ರಹ ವ್ಯವಸ್ಥೆ: ನಂಬರ್ ಪ್ಲೇಟ್ ಆಧರಿಸಿ ಬ್ಯಾಂಕ್ ಖಾತೆಯಿಂದ ನೇರ ಟೋಲ್ ಕಡಿತ ಜಾರಿ ಶೀಘ್ರ

ನವದೆಹಲಿ: ಸರ್ಕಾರವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಉಪಗ್ರಹ ಆಧಾರಿತ GPS ಟೋಲ್ ಸಂಗ್ರಹ ವ್ಯವಸ್ಥೆಯನ್ನು ಹೊರತರಲು ಸಜ್ಜಾಗಿದೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪೂರಕಗಳಿಗೆ ಉತ್ತರಿಸಿದ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಈ ವರ್ಷದ ಲೋಕಸಭೆ ಚುನಾವಣೆಗೆ ಮುನ್ನ ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ವ್ಯವಸ್ಥೆಯಲ್ಲಿ ವಾಹನದ ನಂಬರ್ ಪ್ಲೇಟ್ ಗುರುತಿನೊಂದಿಗೆ ನೇರವಾಗಿ ಬ್ಯಾಂಕ್ ಖಾತೆಗಳಿಂದ ಟೋಲ್ ಕಡಿತಗೊಳಿಸಲಾಗುವುದು. ಹೊಸ ಟೋಲ್ ಸಂಗ್ರಹ ವ್ಯವಸ್ಥೆಯು ಅಸ್ತಿತ್ವದಲ್ಲಿರುವ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಲು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣವನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೆ 8.13 ಕೋಟಿಗೂ ಹೆಚ್ಚು ಫಾಸ್ಟ್ ಟ್ಯಾಗ್‌ಗಳನ್ನು ನೀಡಲಾಗಿದ್ದು, ಸರಾಸರಿ ದೈನಂದಿನ ಸಂಗ್ರಹ 170 ರಿಂದ 180 ಕೋಟಿ ರೂಪಾಯಿಗಳು ಎಂದು ಸಚಿವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read