HomeKarnatakaBIG NEWS : ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ : ಫೆ.8 ರಂದು ರಾಜ್ಯ ಮಟ್ಟದ...

BIG NEWS : ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ : ಫೆ.8 ರಂದು ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ

ಬೆಂಗಳೂರು : ಫೆಬ್ರವರಿ 08ರ ಗುರುವಾರದಂದು ವಿಧಾನಸೌಧ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.

ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಬಳಿ ಸಲ್ಲಿಸಬಹುದಾಗಿದ್ದು, ಅವುಗಳಿಗೆ ಸ್ಥಳದಲ್ಲೇ ಅಥವಾ ಕಾಲಮಿತಿಯೊಳಗೆ ಪರಿಹಾರ ಗ್ಯಾರಂಟಿ.
ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular