HomeKarnatakaಯುಗಾದಿ ಹೊತ್ತಲ್ಲೇ ನೇಕಾರರು, ಕೊಡವರಿಗೆ ಸಿಹಿ ಸುದ್ದಿ: ಅಭಿವೃದ್ಧಿ ನಿಗಮ ಸ್ಥಾಪನೆ

ಯುಗಾದಿ ಹೊತ್ತಲ್ಲೇ ನೇಕಾರರು, ಕೊಡವರಿಗೆ ಸಿಹಿ ಸುದ್ದಿ: ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ನೇಕಾರರ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿದೆ.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿರುವ ದೇವಾಂಗ, ಹಟಗಾರ್, ಹಟಕಾರ್, ಕುರುಹಿನ ಶೆಟ್ಟಿ, ಬಿಳಿಮಗ್ಗ, ತೊಗಟರು, ತೊಗಟವೀರ ಮೊದಲಾದ ಜಾತಿಗಳಿಗೆ ಪ್ರವರ್ಗ  2 ರ ಅಡಿ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ಒದಗಿಸಲಾಗಿದೆ. ಎಲ್ಲಾ ಜಾತಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ನೇಕಾರರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ನಮೂದಾದ ಕೊಡಗರು ಸಮುದಾಯಕ್ಕೆ ಪ್ರವರ್ಗ 3ಎ ಅಡಿ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿ ಕಲ್ಪಿಸಿದ್ದು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular