Congress Guarantee : ‘ಗ್ಯಾರಂಟಿ ಯೋಜನೆ’ಗೆ ಹಣ ಹೊಂದಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ : ಮಾಜಿ ಸಿಎಂ HDK

ರಾಮನಗರ : ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( H.D Kumaraswamy) ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ‘ಸರ್ಕಾರ ಮನಸ್ಸು ಮಾಡಿದರೆ ಗ್ಯಾರಂಟಿ ( Congress Guarantee) ಯೋಜನೆ ಜಾರಿಗೊಳಿಸಲು ಕಷ್ಟ ಏನು ಆಗಲ್ಲ,ಸರಿಯಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು ಅಷ್ಟೇ’ ಎಂದರು.

ಬಿಜೆಪಿಯವರು ಬಾಲಿಶ ಹೇಳಿಕೆ ನೀಡುತ್ತಿದ್ದಾರೆ, ಗ್ಯಾರಂಟಿ ಯೋಜನೆಗಳಿಗೆ ಸರಿಯಾಗಿ ಸರ್ಕಾರ ವ್ಯವಸ್ಥೆ ಮಾಡಿಕೊಂಡರೆ ಹಣ ಹೊಂದಿಸಬಹುದು. ನಾನು ಕೂಡ ರಾಜ್ಯದ ಸಿಎಂ ಆಗಿ ಅಧಿಕಾರ ನಡೆಸಿದ್ದೇನೆ, ಹಾಗಾಗಿ ನನಗೆ  ಈ ಬಗ್ಗೆ ಗೊತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read