ಬೆಂಗಳೂರು: ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಹಾಮಂಡಳ ಅಧ್ಯಕ್ಷ ಬಿ.ಡಿ. ಭೂಕಾಂತ್ ಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನವನ್ನು ಸರ್ಕಾರ ಹಿಂಪಡೆದುಕೊಂಡಿದೆ.
ಅವರಿಗೆ ರಾಜ್ಯ ಸಚಿವ ಸ್ಥಾನ ನೀಡಿರುವುದಕ್ಕೆ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಸಚಿವ ಸ್ಥಾನ ಮಾನ ಹಿಂಪಡೆದು ಆದೇಶ ಹೊರಡಿಸಿದೆ.
ನಿಗಮ ಮಂಡಳಿ ಮತ್ತು ಪ್ರಾಧಿಕಾರದ ಅಧ್ಯಕ್ಷರಾಗಿರುವ 54 ಮಂದಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರ್ಕಾರ ಇತ್ತೀಚೆಗಷ್ಟೇ ಆದೇಶಿಸಿದೆ. ಆದರೆ ಇವರಲ್ಲಿ ಶಿಕಾರಿಪುರದ ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.
54 ಮಂದಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಮತ್ತು ಶಿಕಾರಿಪುರದ ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ ಅವರ ಹೆಸರು ಕೂಡ ಉಲ್ಲೇಖಿಸಲಾಗಿತ್ತು. ಬಿ.ಡಿ. ಭೂಕಾಂತ್ ಬಿಜೆಪಿ ಮುಖಂಡರಾಗಿದ್ದಾರೆ. ಅವರ ಪತ್ನಿ ಬಿಜೆಪಿಯಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಹೀಗಿರುವಾಗ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರ್ಕಾರ ಆದೇಶಿಸಿರುವುದು ಸ್ವಪಕ್ಷ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತ.
ಪ್ರಮುಖ ನಿಗಮ ಮಂಡಳಿಗಳ ಅಧ್ಯಕ್ಷರಾಗಿರುವ ಶಾಸಕರಿಗೆ ಮಾತ್ರ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತಿತ್ತು. ಇದೀಗ ಎಲ್ಲಾ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರಿಗೂ ಅನ್ವಯವಾಗುವಂತೆ ಸರ್ಕಾರ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶಿಸಿದೆ. ಇವರಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾದ ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ ಅವರಿಗೆ ಸಚಿವ ಸ್ಥಾನಮಾನ ನೀಡಿರುವುದಕ್ಕೆ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದ್ದರಿಂದ ಸ್ಥಾನ ಮಾನ ಹಿಂಪಡೆಯಲಾಗಿದೆ ಎನ್ನಲಾಗಿದೆ.

