ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಜನೌಷಧಿ ಕೆಂದ್ರಗಳ ಸ್ಥಗಿತ ಕುರಿತಾಗಿ ಹೈಕೋರ್ಟ್ ನೀಡಿದ ಮಧ್ಯಂತರ ತಡೆ ಆದೇಶವನ್ನು ಸ್ವಾಗತಿಸುತ್ತೇನೆ. ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಜನೌಷಧಿ ಕೇಂದ್ರಗಳ ಸ್ಥಗಿತದ ಕುರಿತು ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿದೆ. ಖಾಸಗಿ ಮೆಡಿಕಲ್ ಫಾರ್ಮಾಗಳಿಗೆ ಅನುಕೂಲ ಕಲ್ಪಿಸಲು ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಿತ್ತು. ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇನ್ನಾದರೂ ಆರೋಗ್ಯ ಸಚಿವರು ಜನರಿಗೆ ಏನು ಬೇಕೆಂಬುದನ್ನು ಅರಿತು ಕೆಲಸ ಮಾಡಲಿ ಎಂದು ಆಗ್ರಹಿಸಿದ್ದಾರೆ.