ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಐದು ಪ್ರಮುಖ ದೇವಾಲಯಗಳ ಅಭಿವೃದ್ಧಿಗೆ ಪ್ರತ್ಯೇಕವಾಗಿ ರಚಿಸಿರುವ ಪ್ರಾಧಿಕಾರಗಳ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅನುಮೋದನೆ ನೀಡಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ, ಬೆಳಗಾವಿಯ ರೇಣುಕಾ ಯಲ್ಲಮ್ಮ ದೇವಾಲಯ ಪ್ರಾಧಿಕಾರ, ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ, ಕೊಪ್ಪಳ ಜಿಲ್ಲೆಯ ಹುಲಗಿಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿ ಪ್ರಾಧಿಕಾರ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲಾಗಿತ್ತು. ಈ ಮಸೂದೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.
ಪ್ರಮುಖ ದೇವಾಲಯಗಳು ಅಗತ್ಯ ಮೂಲ ಸೌಲಭ್ಯ ಒಳಗೊಂಡಂತೆ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ದೇವಾಲಯ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲಾಗಿದೆ. ಪೂಜಾ ವಿಧಿ ವಿಧಾನಗಳು ಸುಸೂತ್ರವಾಗಿ ನಡೆಯಲು ಇಲಾಖೆಯ ಗ್ರೂಪ್ ಎ ಹಿರಿಯ ಶ್ರೇಣಿ ಅಧಿಕಾರಿಗಳನ್ನು ಕಾರ್ಯದರ್ಶಿಗಳ ಹುದ್ದೆಗೆ ನೀವು ನಿಯೋಜಿಸಲು ತಿದ್ದುಪಡಿಯ ಕತರಲಾಗಿತ್ತು. ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಂಗೀಕಾರ ದೊರೆತಿದ್ದು, ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ಈಗ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ದೇವಾಲಯಗಳಲ್ಲಿ ಪೂಜೆ, ಆಚರಣೆ, ಸೌಕರ್ಯ ಹೆಚ್ಚಿಸಲು ಈ ಮಹತ್ವದ ವಿಧೇಯಕ ತಂದಿದ್ದಾರೆ.

