HomeKarnatakaHDK, ಜನಾರ್ದನ ರೆಡ್ಡಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ರೆಡ್ ಸಿಗ್ನಲ್: ಕಡತ ವಾಪಸ್

HDK, ಜನಾರ್ದನ ರೆಡ್ಡಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ರೆಡ್ ಸಿಗ್ನಲ್: ಕಡತ ವಾಪಸ್

ಬೆಂಗಳೂರು: ಕೇಂದ್ರ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಕಡತಗಳನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ಎಸ್ಐಟಿ ಹಾಗೂ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲು ಪ್ರತ್ಯೇಕವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.

ಈ ಕುರಿತಾದ ಸಾವಿರಾರು ಪುಟಗಳ ಆರೋಪ ಪಟ್ಟಿಯನ್ನು ಕನ್ನಡದಿಂದ ಇಂಗ್ಲೀಷ್ ಗೆ ಅನುವಾದಿಸಿ ತನಿಖಾಧಿಕಾರಿ ರಾಜ್ಯಪಾಲರಿಗೆ ಸಲ್ಲಿಸಿದ್ದರು. ಆದರೆ, ಕೆಲವು ತಾಂತ್ರಿಕ ಕಾರಣ ಮುಂದಿಟ್ಟು, ಅವುಗಳಿಗೆ ಸ್ಪಷ್ಟನೆ ಕೋರಿ ಲೋಕಾಯುಕ್ತ ಪೊಲೀಸರು ಮತ್ತು ಎಸ್ಐಟಿ ಅಧಿಕಾರಿಗಳಿಗೆ ರಾಜ್ಯಪಾಲರು ಆರೋಪ ಪಟ್ಟಿಯ ಕಡತ ಮರಳಿಸಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular