ರಾಜ್ಯಪಾಲರು ‘ರಾಜೀನಾಮೆ’ ಕೊಡಬೇಕೆ ಹೊರತು ನಾನಲ್ಲ : ಸಿಎಂ ಸಿದ್ದರಾಮಯ್ಯ ತಿರುಗೇಟು.!

ಬೆಂಗಳೂರು : ತಪ್ಪು ಮಾಡದ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾನೂನುಬಾಹಿರ ನಿರ್ಣಯ ಕೈಗೊಂಡ ರಾಜ್ಯಪಾಲರು ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಯಾವುದೇ ದಾಖಲೆ, ಸಾಕ್ಷ್ಯ, ತನಿಖೆ ಇಲ್ಲದಿದ್ದರೂ ರಾಜ್ಯಪಾಲರು ಆಧಾರವಿಲ್ಲದೆ ಅನುಮತಿ ನೀಡಿ ಬಿಜೆಪಿ ಒತ್ತಡಕ್ಕೆ ಒಳಗಾಗಿದ್ದಾರೆ. ತಪ್ಪು ಮಾಡದ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾನೂನುಬಾಹಿರ ನಿರ್ಣಯ ಕೈಗೊಂಡ ರಾಜ್ಯಪಾಲರು ರಾಜೀನಾಮೆ ನೀಡಬೇಕು. ದೊಡ್ಡ ಷಡ್ಯಂತ್ರ ನಡೆಯುತ್ತಿರುವುದು ನಮಗೆ ಗೊತ್ತಿತ್ತು. ಅದಕ್ಕೆ ನಾವೂ ಹೋರಾಟದ ಸಿದ್ಧತೆ ಮಾಡಿಕೊಂಡಿದ್ದೇವೆ.

ಬಿಜೆಪಿ, ಜೆಡಿಎಸ್ ರಾಜ್ಯದ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ. ನಾವು ಸತ್ಯ ಮುಂದಿಟ್ಟು ಜನರ ನಡುವೆ ಮತ್ತಷ್ಟು ಗಟ್ಟಿ ಆಗುತ್ತೇವೆ. ನಮ್ಮ ಸಮಾವೇಶಕ್ಕೆ ಒಂದೂವರೆ ಲಕ್ಷ ಜನ ಸೇರಿದ್ದರು. ಬಿಜೆಪಿಗೆ 30 ಸಾವಿರ ಕೂಡ ಸೇರಿಲ್ಲ. ಜನ ನಮ್ಮ ಪರವಾಗಿ ಇರುವುದಕ್ಕೆ ಇದೇ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯಪಾಲರು ರಾಷ್ಟ್ರಪತಿ, ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು, ಕೇಂದ್ರ
BJP  ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ರಾಜ್ಯಪಾಲರ ಈ ಧೋರಣೆಯನ್ನು ಸಚಿವ ಸಂಪುಟ ತೀವ್ರವಾಗಿ ಖಂಡಿಸಿದೆ.

ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸುತ್ತಿದೆ. ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಧಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ, ಪ್ರಜಾತಂತ್ರಕ್ಕೆ ಧಕ್ಕೆ ಎಂದು ಸಚಿವ ಸಂಪುಟ ನಿರ್ಣಯಿಸಿದೆ.

ಎಲ್ಲಾ ರಾಜ್ಯ ಸರ್ಕಾರಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಸೆಪ್ಟೆಂಬರ್ 3, 2021 ಕ್ಕೆ ಕೇಂದ್ರ ಸರ್ಕಾರವೇ ಕಳುಹಿಸಿರುವ ಸುತ್ತೋಲೆ ಪ್ರಕಾರವೇ ರಾಜ್ಯಪಾಲರು ಪ್ರೊಸೀಜರ್ ಅನುಸರಿಸಿಲ್ಲ. ಸುತ್ತೋಲೆಯಲ್ಲಿರುವ ನಿರ್ದೇಶನಗಳನ್ನೇ ರಾಜ್ಯಪಾಲರು ಪಾಲಿಸಿಲ್ಲ. ಆದ್ದರಿಂದ ರಾಜ್ಯಪಾಲರ ನಿರ್ಣಯ ಕಾನೂನುಬಾಹಿರ.
ಈ ಕಾನೂನುಬಾಹಿರ ತೀರ್ಮಾನದ ವಿರುದ್ಧ ಕಾನೂನು ಹೋರಾಟ ನಡೆಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

https://twitter.com/siddaramaiah/status/1824844175583396256

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read