HomeLatest NewsBIG NEWS: ಸಚಿವರು, ಶಾಸಕರ ವೇತನ, ಭತ್ಯೆ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

BIG NEWS: ಸಚಿವರು, ಶಾಸಕರ ವೇತನ, ಭತ್ಯೆ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹೆಚ್ಚಳದ ಎರಡು ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಪತ್ರ ಪ್ರಕಟಿಸಲಾಗಿದೆ.

ಮುಖ್ಯಮಂತ್ರಿ, ಸಚಿವರ ವೇತನ, ಭತ್ಯೆ ಹೆಚ್ಚಳದ ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ- 2025 ಹಾಗೂ ಸಭಾಧ್ಯಕ್ಷ, ಉಪ ಸಭಾಧ್ಯಕ್ಷ, ಸಭಾಪತಿ, ಉಪ ಸಭಾಪತಿ ಹಾಗೂ ಶಾಸಕರ ವೇತನ, ಭತ್ಯೆ ಹೆಚ್ಚಳದ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಮಂಡಲ ಅಧಿವೇಶನದಲ್ಲಿ ಅನುಮೋದನೆ ನೀಡಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ರಾಜ್ಯಪಾಲರು ಈ ವಿಧೇಯಕಗಳಿಗೆ ಒಪ್ಪಿಗೆ ನೀಡಿದ್ದು, ಇದರ ಆಧಾರದ ಮೇಲೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular