HomeKarnatakaಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಮತಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ಅಂಕಿತ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಮತಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ತಿದ್ದುಪಡಿ ವಿಧೇಯಕ 2026 ಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಗೆಜೆಟ್ ನಲ್ಲಿ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ಇವಿಎಂ ಬದಲು ಬ್ಯಾಲೆಟ್ ನಲ್ಲಿ ನಡೆಸಲು ಕಾನೂನಿನ ಮಾನ್ಯತೆ ನೀಡಲಾಗಿದೆ. ಇವಿಎಂ ಬದಲು ಬ್ಯಾಲೆಟ್ ವ್ಯವಸ್ಥೆಗೆ ಸರ್ಕಾರ ಮರು ಪ್ರವೇಶಿಸಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಮತದಾರರ ವಿಶ್ವಾಸ ಮರುಸ್ಥಾಪನೆಗೆ ರಾಜ್ಯ ಸರ್ಕಾರ ಪ್ರಯತ್ನಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ಯಾಲೆಟ್ ಪೇಪರ್ ಬಳಕೆ ಮೂಲಕ ಚುನಾವಣಾ ವ್ಯವಸ್ಥೆ ಬಲಪಡಿಸಲು ಈ ನಿರ್ಧಾರ ಎಂದು ಸರ್ಕಾರ ಹೇಳಿದ್ದು ಕಾನೂನು ತಿದ್ದುಪಡಿಯ ಮೂಲಕ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುವುದು. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular