BREAKING: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ ರಾಜ್ಯಪಾಲ ಗೆಹ್ಲೊಟ್

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೊಂಡಾಡಿದ್ದಾರೆ. ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಗ್ಯಾರಂಟಿಗಳ ಮೂಲಕ ದೇಶದಲ್ಲಿ ಹೊಸ ಸಂದೇಶ ನೀಡಲಾಗಿದೆ. ಗ್ಯಾರಂಟಿಗಳನ್ನು ಟೀಕೆ ಮಾಡುವವರಿಗೆ ಯೋಜನೆ ಯಶಸ್ಸಿನ ಮೂಲಕ ಸಂದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ. ಪ್ರತಿ ಮಹಿಳೆಗೆ ಮಾಸಿಕ 2000 ರೂ. ಹಣ ನೀಡಲಾಗುತ್ತಿದೆ. ಕೋಟ್ಯಂತರ ಮಹಿಳೆಯರು ಇದರ ಲಾಭವನ್ನು ಪಡೆದುಕೊಂಡಿದ್ದಾರೆ ಗೃಹಲಕ್ಷ್ಮಿ ಯೋಜನೆಗೆ 35 180 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಗೃಹಜ್ಯೋತಿ ಯೋಜನೆ ಜಾರಿ ಮಾಡಲಾಗಿದ್ದು, ರಾಜ್ಯದ 1.62 ಕೋಟಿ ಜನ ಇದರ ಲಾಭ ಪಡೆಯುತ್ತಿದ್ದಾರೆ. ಅದೇ ರೀತಿ ಶಕ್ತಿ ಯೋಜನೆ, ಯುವನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ರಾಜ್ಯಪಾಲರು ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read