HomeLive NewsBIG NEWS: ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದಲ್ಲಿ ಇರುವ ಅಂಶಗಳೇನು?

BIG NEWS: ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದಲ್ಲಿ ಇರುವ ಅಂಶಗಳೇನು?

ಬೆಂಗಳೂರು: ಕರ್ನಾಟಕ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನ ಮೊದಲ ದಿನವೇ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ತೀವ್ರ ಗೊಂದಲ, ಕುತೂಹಲಗಳ ನಡುವೆಯೇ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೂರೇ ಸಾಲಿನಲ್ಲಿ ಭಾಷಣ ಮುಗಿಸಿ ಅಧಿವೇಶನದಿಂದ ತೆರಳಿದ್ದಾರೆ. ರಾಜ್ಯ ಸರ್ಕಾರದ ಭಾಷಣ ಓದಲು ನಿರಾಕರಿಸಿದ್ದಾರೆ. ಇಷ್ಟಕ್ಕೂ ರಾಜ್ಯಪಾಲರ ಮೂರು ಸಾಲುಗಳಲ್ಲಿ ಇದ್ದ ಭಾಷಣ ಅಂಶಗಳೇನು? ಇಲ್ಲಿದೆ ಸ್ವಾರಸ್ಯಕರ ಸಂಗತಿ.

ನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿದ್ದ ವಿಶೇಷ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಬೇಕಿತ್ತು. ಆದರೆ ರಾಜ್ಯಪಾಲರು ಅಧಿವೇಶನಕ್ಕೆ ಆಗಮಿಸಿ ಶುಭಕೋರಿ, ಮೂರು ವಾಕ್ಯಗಳಲ್ಲಿ ಮಾತು ಮುಗಿಸಿ ತೆರಳುವ ಮೂಲಕ ಜಾಣ್ಮೆ ಪ್ರದರ್ಶಿಸಿದ್ದಾರೆ. ನರೇಗಾ ಯೋಜನೆಯ ಹೆಸರು ಬದಲಿಸಿ ಕೇಂದ್ರ ಸರ್ಕಾರ ವಿಬಿ ಜಿ ರಾಮ್ ಜಿ ಎಂದು ಮರುನಾಮಕರಣ ಮಾಡಿದೆ. ಈ ಹೆಸರು ಬದಲಾವಣೆ ಕಾಯ್ದೆಗೆ ರಾಷ್ಟ್ರಪತಿಗಳೇ ಅಂಕಿತ ಹಾಕಿದ್ದಾರೆ. ಹೀಗಿರುವಾಗ ರಾಜ್ಯ ಕಾಂಗ್ರೆಸ್ ಸರ್ಕಾರ ನರೇಗಾ ಯೋಜನೆ ಹೆಸರು ಬದಲಾವಣೆಗೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಖಂಡನೆಯ ಪದಗಳನ್ನು ಬಳಸಿ ರಾಜ್ಯಪಾಲರಿಗೆ ಭಾಷಣ ಸಿದ್ಧಪಡಿಸಿ ಕೊಟ್ಟಿತ್ತು. ರಾಷ್ಟ್ರಪತಿಗಳು ಅಂಕಿತ ಹಾಕಿರುವ ವಿಬಿ ಜಿ ರಾಮ್ ಜಿ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸುವ ರೀತಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬರೆದುಕೊಟ್ಟಿರುವ ಭಾಷಣ ಓದಿದಲ್ಲಿ ಮುಂದಾಗುವ ಸಮಸ್ಯೆ ಅರಿತ ರಾಜ್ಯಪಾಲರು ಬುದ್ಧಿವಂತಿಕೆ ಪ್ರದರ್ಶಿಸಿ, ಅಧಿವೇಶನಕ್ಕೆ ಶುಭಕೋರಿ ಮೂರು ಸಾಲುಗಳಲ್ಲಿ ಭಾಷಣ ಮುಗಿಸಿ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ಸಂಘರ್ಷದ ನಡುವೆಯೇ ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿತ್ತು. ಅಧಿವೇಶನಕ್ಕೆ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರು-ಶಾಸಕರು ಸ್ವಾಗತಿಸಿದರು. ಜಂಟಿ ಅಧಿವೇಶನದಲ್ಲಿ ಭಾಷಣ ಆರಂಭಿಸಿದ ರಾಜ್ಯಪಾಲರು ಕೇವಲ ಮೂರು ಸಾಲಿನಲ್ಲೇ ಭಾಷಣ ಮುಗಿಸಿ ತೆರಳಿದ್ದಾರೆ. ರಾಜ್ಯ ಸರ್ಕಾರ ಕೊಟ್ಟ ಭಾಷಣವನ್ನು ಓದಲು ನಿರಾಕರಿಸಿರುವ ರಾಜ್ಯಪಾಲರು ಭಾಷಣ ಓದದೇ ಸದನದಿಂದ ತೆರಳಿದ್ದಾರೆ.

ರಾಜ್ಯಪಾಲರ ಮೂರು ವಾಕ್ಯಗಳ ಭಾಷಣದಲ್ಲಿರುವುದು ಏನೆಂದು ನೋಡುವುದಾದರೆ, ಸಿಎಂ, ಸ್ಪೀಕರ್, ಎಲ್ಲಾ ಸದಸ್ಯರಿಗೆ ಜಂಟಿ ಅಧಿವೇಶನಕ್ಕೆ ಸ್ವಾಗತ. ನನ್ನ ಸರ್ಕಾಅರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ವಿಕಾಸವನ್ನು ನನ್ನ ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ. ಜೈ ಹಿಂದ್, ಜೈ ಕರ್ನಾಟಕ… ಎಂದಷ್ಟೇ ಭಾಷಣ ಮಾಡಿ ಸದನದಿಂದ ನಿರ್ಗಮಿಸಿದ್ದಾರೆ.

ರಾಜ್ಯಪಾಲರ ಈ ನಡೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗವರ್ನರ್ ನಡೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ನಡೆ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹಾಗೂ ಕಾನೂನು ಹೋರಾಟ ನಡೆಸುವುದಾಗಿ ಗುಡುಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular