HomeLatest NewsBIG NEWS: ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

BIG NEWS: ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸಿದ್ದ ವಿಚಾರವಾಗಿ ಲೋಕಭವನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರುಗೆ ವರದಿ ರವಾನಿಸಿದೆ.

ರಾಜ್ಯ ಕಾಂಗ್ರೆಸ್ ಸರ್ಕಾಅರ ಕರೆದಿರುವ ವಿಧಾನಮಂದಲ ಜಂಟಿ ಅಧಿವೇಶನದ ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಸರ್ಕಾರ ಬರೆದುಕೊಟ್ಟಿದ್ದ ಭಾಷಣ ಮಾಡಲು ನಿರಾಕರಿಸಿ, ಮೂರೇ ಸಾಲುಗಳಲ್ಲಿ ಭಾಷಣ ಮುಗಿಸಿ ಸದನದಿಂದ ನಿರ್ಗಮಿಸಿದ್ದರು. ಕಾರಣ ನರೇಗಾ ಯೋಜನೆ ಹೆಸರು ಬದಲಿಸಿ ವಿಬಿಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಇದಾಗಿದೆ. ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಬರೆದು ಕೊಟ್ಟಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀಕೆಗಳಿದ್ದವು. ಕೇಂದ್ರದ ನಡೆಯನ್ನು ಖಂಡಿಸುವ ಶಬ್ಧಗಳ ಉಲ್ಲೇಖವಾಗಿತ್ತು ರಾಷ್ಟ್ರಪತಿಗಳೇ ಅಂಕಿತ ಹಾಕಿರುವ ವಿಬಿಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸುವಂತಹ ಉಲ್ಲೇಖವಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲರು ಭಾಷಣ ಓದಲು ನಿರಾಕರಿಸಿ ಸದನದಿಂದ ನಿರ್ಗಮಿಸಿದ್ದರು. ಕರ್ನಾಟಕದ ರಾಜ್ಯಪಾಲರ ಈ ನಡೆ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು.

ರಾಜ್ಯಪಾಲರು ಭಾಷಣ ಮಾಡದೇ ತೆರತ್ತಿದ್ದಾಗ ಸದನದ ಬಾಗಿಲ ಬಳಿ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿ ತಡೆಯಲು ಯತ್ನಿಸಿದ್ದರು. ರಾಜ್ಯಪಲರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ವಿಧಾನಸಭೆಯಲ್ಲಿ ನಡೆದಿದ್ದ ಈ ಬೆಳವಣಿಗೆಗಳ ಬಗ್ಗೆ ಇದೀಗ ಲೋಕಭವನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ನೀಡಿದೆ. ವಾಸ್ತವಾಂಶಗಳ ಪ್ರತ್ಯೇಕ ವರದಿ ಸಿದ್ಧಪಡಿಸಿ ಕಳುಹಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಬೆಳವಣಿಗೆಗಳ ಬಗ್ಗೆ ವಾರ, ತಿಂಗಳಿಗೊಮ್ಮೆ ರಾಷ್ಟ್ರಪತಿಗೆ ವರದಿ ಸಲ್ಲಿಸುವುದು ರಾಜ್ಯಪಾಲರ ವಡಿಕೆ. ಈ ಬಾರಿ ವಾರದ ವರದಿ ಅಲ್ಲದೇ ಪ್ರತ್ಯೇಕ ವರದಿಯನ್ನು ಸಿದ್ಧಪಡಿಸಿ ವಿಧಾನಸಭೆಯಲ್ಲಿ ಭಾಷಣ ಮಾಡದೇ ಸದನದಿಂದ ನಿರ್ಗಮಿಸಿದ್ದು, ಆ ಬಳಿಕ ಕಾಂಗ್ರೆಸ್ ಸದಸ್ಯರು ನಡೆದುಕೊಂಡ ರೀತಿ ನಂತರದ ಬೆಳವಣಿಗೆಗಳ ಬಗ್ಗೆ ಪ್ರತ್ಯೇಕವಾಗಿ ವರದಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular