HomeLive Newsಜ. 22ರಿಂದ 31ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ರಾಜ್ಯಪಾಲರ ಅಧಿಕೃತ ಅಧಿಸೂಚನೆ

ಜ. 22ರಿಂದ 31ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ರಾಜ್ಯಪಾಲರ ಅಧಿಕೃತ ಅಧಿಸೂಚನೆ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನವನ್ನು ಜನವರಿ 22 ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

ಬುಧವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಜಂಟಿ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಇದರ ಬೆನ್ನಲ್ಲೇ ಅಧಿವೇಶನ ಕರೆದು ರಾಜ್ಯಪಾಲರು ಸೂಚನೆ ಹೊರಡಿಸಿದ್ದಾರೆ.

ಜನವರಿ 22 ರಿಂದ 31ರವರೆಗೆ ಅಧಿವೇಶನದಲ್ಲಿ ನಡೆಯಲಿರುವ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯನ್ನು ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 22ರಂದು ಬೆಳಿಗ್ಗೆ 11 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜಪಾಲರು ಭಾಷಣ ಮಾಡಲಿದ್ದಾರೆ. ಜನವರಿ 23ರಂದು ಕಲಾಪ ನಡೆಯಲಿದೆ. ಜ. 24 ಶನಿವಾರ, ಜ. 25 ಭಾನುವಾರ ಮತ್ತು ಜನವರಿ 26ರ ಸೋಮವಾರ ಗಣರಾಜ್ಯೋತ್ಸವ ಸೇರಿ ಮೂರು ದಿನ ಸಾರ್ವತ್ರಿಕ ರಜಾ ದಿನ ಇರಲಿದೆ. ನಂತರ ಜನವರಿ 27 ರಿಂದ 31ರ ಶನಿವಾರದವರೆಗೆ ಐದು ದಿನ ಸತತವಾಗಿ ಕಲಾಪ ನಡೆಯಲಿದ್ದು, ಒಟ್ಟು 7 ದಿನಗಳ ಕಾಲ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular