ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕನಿಷ್ಠ 3 ಕಿಮೀ ವ್ಯಾಪ್ತಿಯಲ್ಲಿ ಅಂಚೆ ಕಚೇರಿ ಆರಂಭಿಸಲು ಸರ್ಕಾರದ ಗುರಿ

ನವದೆಹಲಿ: ಕನಿಷ್ಠ 3 ಕಿಲೋಮೀಟರ್ ಪ್ರದೇಶದಲ್ಲಿ ಅಂಚೆ ಕಚೇರಿಯನ್ನು ಆರಂಭಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಲಾಗಿದೆ.

ರಾಜ್ಯಸಭೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಸಂಪರ್ಕ ರಾಜ್ಯ ಸಚಿವ ಚಂದ್ರಶೇಖರ್ ಪೆಮ್ಮಸಾನಿ, ಕಳೆದ 10 ವರ್ಷಗಳಲ್ಲಿ 10,500ಕ್ಕೂ ಹೆಚ್ಚು ಹೊಸ ಅಂಚೆ ಕಚೇರಿಗಳನ್ನು ರಚಿಸಲಾಗಿದ್ದು, ಅವುಗಳಲ್ಲಿ 90 ಪ್ರತಿಶತ ಗ್ರಾಮೀಣ ಪ್ರದೇಶದಲ್ಲಿವೆ. ಹೊಸ ಅಂಚೆ ಕಚೇರಿಗಳಲ್ಲಿ 5 ಸಾವಿರಕ್ಕೂ ಹೆಚ್ಚು ಎಡಪಂಥೀಯ ಉಗ್ರಗಾಮಿ ಪೀಡಿತ ಪ್ರದೇಶಗಳಲ್ಲಿವೆ ಎಂದು ಹೇಳಿದ್ದಾರೆ.

ಕಳೆದ 5 ವರ್ಷಗಳಲ್ಲಿ ಅಂಚೆ ಇಲಾಖೆಯ ಯಾವೊಬ್ಬ ನೌಕರರ ಕಡಿಮೆ ಮಾಡಿಲ್ಲ. ಪ್ರಸ್ತುತ ದೇಶಾದ್ಯಂತ 1.65 ಲಕ್ಷಕ್ಕೂ ಹೆಚ್ಚು ಅಂಚೆ ಕಚೇರಿಗಳಲ್ಲಿ ಸುಮಾರು 4.50 ಲಕ್ಷ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read