HomeAgricultureರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರಕ್ಕೆ 1.08 ಲಕ್ಷ ಕೋಟಿ ರೂ. ಸಬ್ಸಿಡಿ; ಬೆಲೆ ಹೆಚ್ಚಳ...

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರಕ್ಕೆ 1.08 ಲಕ್ಷ ಕೋಟಿ ರೂ. ಸಬ್ಸಿಡಿ; ಬೆಲೆ ಹೆಚ್ಚಳ ಇಲ್ಲ

ನವದೆಹಲಿ: ಈ ವರ್ಷ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗಾಗಿ ಸರ್ಕಾರದಿಂದ 1,08,000 ಕೋಟಿ ರೂ. ನೀಡಲಾಗುವುದು.

ರಸಗೊಬ್ಬರ ಸಬ್ಸಿಡಿಗೆ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಾ. ಮನ್ಸುಖ್ ಮಾಂಡವಿಯಾ, ರಸಗೊಬ್ಬರಗಳ ಬೆಲೆಯನ್ನು ಹೆಚ್ಚಿಸುವುದಿಲ್ಲ ಮತ್ತು ರೈತರು ಅದೇ ವೆಚ್ಚದಲ್ಲಿ ಪೋಷಕಾಂಶ ಆಧಾರಿತ ರಸಗೊಬ್ಬರಗಳನ್ನು ಈಗಿನಂತೆ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸಗೊಬ್ಬರ ಸಬ್ಸಿಡಿ ನೀಡಲು ಯೂರಿಯಾಕ್ಕೆ 70 ಸಾವಿರ ಕೋಟಿ ರೂ. ಹಾಗೂ ಡಿಎಪಿಗೆ 38 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ರೈತರಿಗೆ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಸಿಗುತ್ತಿದೆ. ಕಳೆದ ವರ್ಷ ಜಾಗತಿಕ ಮಟ್ಟದಲ್ಲಿ ರಸಗೊಬ್ಬರ ಬೆಲೆ ಏರಿಕೆಯಾಗಿದ್ದರೂ ಸರ್ಕಾರ ಕೈಗೆಟಕುವ ದರದಲ್ಲಿ ರಸಗೊಬ್ಬರಗಳನ್ನು ನೀಡಿದೆ ಎಂದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular