ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ದೌರ್ಜನ್ಯ ಮಾಡಲಾಗಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ದಲಿತ ಶಾಲಾ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಚ ಮಾಡಲು ಬಳಕೆ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರೀಯವಾಗಿದೆ. ಯಾರಿಗೂ ಭಯ ಇಲ್ಲ. ಸರ್ಕಾರ ಅಧಿಕಾರಿಗಳ  ಮೇಲೆ ಸಂಪೂರ್ಣ ಹಿಡಿತ ಕಳೆದುಕೊಂಡಿದೆ. ಇಲ್ಲಿ ಮಹಿಳೆಯರು, ಮಕ್ಕಳು, ದಲಿತರಿಗೆ ಸುರಕ್ಷತೆ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಇದ್ದೂ ಸತ್ತಂತಾಗಿದ್ದು, ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿ ಶಾಪ ಹಾಕುವಂತಾಗಿದೆ ಎಂದು ಟೀಕಿಸಿದ್ದಾರೆ.

https://twitter.com/BSBommai/status/1736325672878957053

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read