HomeIndiaಮೇಲ್ಸೇತುವೆಯಿಂದ ಬಿದ್ದ ಸರ್ಕಾರಿ ಬಸ್; 20 ಪ್ರಯಾಣಿಕರಿಗೆ ಗಂಭೀರ ಗಾಯ

ಮೇಲ್ಸೇತುವೆಯಿಂದ ಬಿದ್ದ ಸರ್ಕಾರಿ ಬಸ್; 20 ಪ್ರಯಾಣಿಕರಿಗೆ ಗಂಭೀರ ಗಾಯ

ಲಖನೌ: ಸರ್ಕಾರಿ ಬಸ್ ಒಂದು ಚಾಲಕನ ನಿಯಂತ್ರಣತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, 20 ಪ್ರಯಾಣಿಕರು ಗಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇ ನಲ್ಲಿ ತೆರಳುತ್ತಿದ್ದ ಸರ್ಕಾರಿ ಬಸ್, ಹವಾ ಹವಾಯಿ ರೆಸ್ಟೋರೆಂಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ 20 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular